ಮಹಾನ್ ನಾಯಕರ ಬಗ್ಗೆ ಹಗುರ ಮಾತು ಸಲ್ಲ; ಮಾಜಿ ಸಚಿವ ಬಸವರಾಜ ರಾಯರಡ್ಡಿ ಅಭಿಪ್ರಾಯ

16082021 Yelburga Basavaraj Rayareddi
Published on

ಯಲಬುರ್ಗಾ: ದೇಶದ ಮಹಾನ್ ನಾಯಕರ ಬಗ್ಗೆ ಹಗುರವಾಗಿ ಮಾತನಾಡದೆ, ಪಕ್ಷಾತೀತವಾಗಿ ಗೌರವ ಕೊಡಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೆಹರು, ವಾಜಪೇಯಿ, ಇಂದಿರಾ ಗಾಂಧಿ ದೊಡ್ಡ ವ್ಯಕ್ತಿಗಳು, ಅಂಥವರ ಬಗ್ಗೆ ಅವಹೇಳನ, ಅಪಪ್ರಚಾರ ಮಾಡುತ್ತಿರುವುದು ಬೇಸರದ ಸಂಗತಿ. ಇದು ಸಂಸ್ಕಾರ, ಸಂಸ್ಕೃತಿಯನ್ನು ಎತ್ತಿ ತೋರುತ್ತಿದೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಸರಿಯಾದ ಕ್ರಮವಲ್ಲ ಎಂದರು.

ಬಿಜೆಪಿ ಆಡಳಿತ ಹಾಗೂ ನಾಯಕರ ಸುಳ್ಳು ಹೇಳಿಕೆಗಳ ಬಗ್ಗೆ ಜನತೆ ಭ್ರಮನಿರಸನಗೊಂಡಿದೆ. ಪಕ್ಷಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಬಿಜೆಪಿ ಮಾಡುತ್ತಿದೆ. ಹೀಗಾಗಿ ಜನರು ಕಾಂಗ್ರೆಸ್ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಯಾರೇ ಬಂದರೂ ಸ್ವಾಗತಿಸುತ್ತೇವೆ. ಜಿಪಂ ಮಾಜಿ ಸದಸ್ಯರಾದ ಅಡಿವೆಪ್ಪ ಬಾವಿಮನಿ, ನೀಲಮ್ಮ ಬಾವಿಮನಿ ಹಾಗೂ ಬೆಂಬಲಿಗರನ್ನು ಪಕ್ಷಕ್ಕೆ ಆಹ್ವಾನಿಸಲಾಗಿದೆ. ಶೀಘ್ರ ಅಧಿಕೃತವಾಗಿ ಪಕ್ಷ ಸೇರಲಿದ್ದಾರೆ ಎಂದು ರಾಯರಡ್ಡಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net