ಶಾಸಕ, ಸಚಿವರಿಗೆ ಅಭಿವೃದ್ಧಿ ಕಲ್ಪನೆಗಳಿಲ್ಲ; ಹಾಲಪ್ಪ ಆಚಾರ್ ವಿರುದ್ಧ ರಾಯರಡ್ಡಿ ಪರೋಕ್ಷ ಟೀಕೆ

01112021 Yelburga congres party
Published on


ಯಲಬುರ್ಗಾ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಶಾಸಕ, ಸಚಿವರಿಗೆ ಕಲ್ಪನೆಗಳಿಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್‌ನ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಭಿವೃದ್ಧಿ ಚಿಂತನೆಯುಳ್ಳವರನ್ನು ಶಾಸಕರಾಗಿ ಆಯ್ಕೆ ಮಾಡಬೇಕು ಹೊರತು ಉದ್ಯಮಿಗಳನ್ನಲ್ಲ. ಬಿಜೆಪಿ ಹಣ ಮತ್ತು ಜಾತಿ ರಾಜಕಾರಣ ಮಾಡುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ ಎಂದು ಆರೋಪಿಸಿದರು.

ಶಾಲಾ ಕೊಠಡಿಗಳನ್ನು ನಿರ್ಮಿಸಿದರೆ ಶಿಕ್ಷಣ ಪ್ರೇಮಿಯಾಗಲು ಸಾಧ್ಯವೇ..? ನನ್ನ ಅವಧಿಯಲ್ಲಿ ಸ್ನಾತಕೋತ್ತರ ಕೇಂದ್ರ, ಇಂಜಿನಿಯರ್ ಕಾಲೇಜು, ಕೌಶಲ ಅಭಿವೃದ್ಧಿ ಕೇಂದ್ರ, ಮುರಾರ್ಜಿ ವಸತಿ ಶಾಲೆಗಳನ್ನು ಆರಂಭಿಸಿದ್ದೇನೆ. 500 ಹಾಸಿಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಆರಂಭಿಸಿ ಶಿಕ್ಷಣ ಪ್ರೇಮಿಯಾಗಲಿ ಎಂದು ಸಚಿವ ಹಾಲಪ್ಪ ಆಚಾರ್ ವಿರುದ್ಧ ಹರಿಹಾಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net