ಬಂಗಾರಪ್ಪ ಕೆಲಸಗಳು ಅಜರಾಮರ

UDGHATANE
ಯಲಬುರ್ಗಾದಲ್ಲಿ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಮಾಜಿ ಸಚಿವ ಹಾಲಪ್ಪ ಆಚಾರ್ ಉದ್ಘಾಟಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ರೇಣುಕಾನಂದ ಸ್ವಾಮೀಜಿ, ತಾಪಂ ಮಾಜಿ ಅಧ್ಯಕ್ಷ ವೀರನಗೌಡ ಬಳೂಟಗಿ, ಮಾಜಿ ಸದಸ್ಯ ಶರಣಪ್ಪ ಈಳಿಗೇರ್, ಮುಖಂಡ ವೀರಣ್ಣ ಹುಬ್ಬಳ್ಳಿ ಇದ್ದರು.
Published on

ಯಲಬುರ್ಗಾ: ಸಮಾನತೆ ಕ್ರಾಂತಿ ನಡೆಸಿದ ನಾರಾಯಣ ಗುರುಗಳ ಆದರ್ಶ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಆರ್ಯ ಈಡಿಗ ಸಮುದಾಯದಿಂದ ಸೋಮವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಢ್ಯ, ಅನಿಷ್ಟ ಪದ್ಧತಿ, ಜಾತಿ ತಾರತಮ್ಯ ವಿರುದ್ಧ ಧ್ವನಿ ಎತ್ತಿದವರಲ್ಲಿ ನಾರಾಯಣ ಗುರು ಅಗ್ರಗಣ್ಯರು. ರಾಜ್ಯದಲ್ಲಿ ಈಡಿಗ ಸಮುದಾಯ ರಾಜಕೀಯ ವಿಶಿಷ್ಟ ಕೊಡುಗೆ ನೀಡಿದೆ. ನಾಡಿನ ಏಳಿಗೆಗಾಗಿ ಅಂದಿನ ಸಿಎಂ ಎಸ್.ಬಂಗಾರಪ್ಪ ಮಾಡಿದ ಜನಪರ ಕೆಲಸಗಳು ಜನರಲ್ಲಿ ಅಚ್ಚಳಿಯದೆ ಉಳಿದಿವೆ. ಸಂಖ್ಯೆಯಲ್ಲಿ ಸಮುದಾಯ ಕಡಿಮೆ ಇದ್ದರೂ ಬುದ್ಧಿವಂತಿಕೆಯಲ್ಲಿ ಮುಂದಿದೆ. ಸಮಾಜದವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಶೈಕ್ಷಣಿಕ ಪ್ರಗತಿಯಾಗಬೇಕು. ಸಾಧು-ಸಂತರ ಮಾರ್ಗದಲ್ಲಿ ಮುನ್ನಡೆದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಈಡಿಗ ಸಮುದಾಯದ ಎಸ್.ಬಂಗಾರಪ್ಪ ತಮ್ಮ ಕಾಲಾವಧಿಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಮತ್ತು ಆಶ್ರಯ ಮನೆ ನೀಡಿರುವುದು ಇಂದಿಗೂ ಜನರಲ್ಲಿ ಅಚ್ಚಳಿಯದೆ ಉಳಿದಿದೆ. ಸಮುದಾಯದವರು ಪಟ್ಟಣದಲ್ಲಿ ನಿವೇಶನ ಖರೀದಿಸಿದರೆ ಶಾಸಕ ರಾಯರಡ್ಡಿಯಿಂದ ಒಂದು ಕೋಟಿ ರೂ. ಅನುದಾನ ಕೊಡಿಸುವ ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮುಂಚೆ ಕನಕದಾಸ ವೃತ್ತದಿಂದ ನಾರಾಯಣ ಗುರುಗಳ ಭಾವಚಿತ್ರ ಮೆರವಣಿಗೆ ನಡೆಯಿತು. ತಾಪಂ ಮಾಜಿ ಅಧ್ಯಕ್ಷ ವೀರನಗೌಡ ಬಳೂಟಗಿ, ಮಾಜಿ ಸದಸ್ಯ ಶರಣಪ್ಪ ಈಳಿಗೇರ್, ಮುಖಂಡ ವೀರಣ್ಣ ಹುಬ್ಬಳ್ಳಿ ಮಾತನಾಡಿದರು. ತೀರ್ಥಹಳ್ಳಿ ನಿಟ್ಟೂರಿನ ರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮುದಾಯದ ತಾಲೂಕು ಅಧ್ಯಕ್ಷ ಮಂಜುನಾಥ ಈಳಿಗೇರ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೇ ಗಣ್ಯರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net