ಸ್ವಾತಂತ್ರ್ಯದಲ್ಲಿ ವಕೀಲರ ಪಾತ್ರ ಪ್ರಮುಖ- ನ್ಯಾಯಾಧೀಶ ವಿಜಯಕುಮಾರ ಕನ್ನೂರು ಹೇಳಿಕೆ

031221 Yalaburga Lawyer's Day
ಯಲಬುರ್ಗಾ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರು ಉದ್ಘಾಟಿಸಿದರು.
Published on

ಯಲಬುರ್ಗಾ: ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ವಕೀಲರ ಪಾತ್ರ ಬಹಳಷ್ಟಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರು ಹೇಳಿದರು.

ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದಿಂದ ಮಾಜಿ ರಾಷ್ಟ್ರಪತಿ ಡಾ.ಬಾಬು ರಾಜೇಂದ್ರ ಪ್ರಸಾದ ಜನ್ಮ ದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಕೀಲಿಕೆ ಸಮಾಜದ ಒಳಿತು ಮತ್ತು ಇತರರ ಹಕ್ಕುಗಳಿಗಾಗಿ ಕೆಲಸ ಮಾಡುವಂಥ ವೃತ್ತಿಯಾಗಿದೆ. ಜ್ಞಾನದ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿನ ಅಡೆತಡೆ ಹೋಗಲಾಡಿಸಲು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಬಹುದಾಗಿದೆ. ನಿಷ್ಠೆ, ಗೌರವ ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಕೆಲಸ ನಿರ್ವಹಿಸಿದರೆ ಸುವ್ಯವಸ್ಥಿತ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಶಾಲಾ ಹಂತದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಹಿನ್ನೆಲೆಯಲ್ಲಿ ತಾಲೂಕಿನ ತಾಳಕೇರಿ ಗ್ರಾಮದ ಸ.ಪ್ರೌ.ಶಾಲೆಯ ಮುಖ್ಯಶಿಕ್ಷಕ ಬಾಬುಸಾಬ್ ಲೈನ್‌ದಾರ್‌ರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net