ಅನುದಾನ ಗ್ರಾಮಗಳಿಗೆ ಸಮರ್ಪಕವಾಗಿ ಹಂಚಿಕೆ - ಪಿಡಿಒ ಹನುಮಂತರಾಯ ಯಂಕಂಚಿ ಮಾಹಿತಿ

Published on

ಯಲಬುರ್ಗಾ; ಅಗತ್ಯವಿರುವ ಅನುದಾನದ ಲಭ್ಯತೆಯ ಮೇರೆಗೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಹಂಚಿಕೆ ಮಾಡಲಾಗುವುದು. ಈ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು ಎಂದು ಪಿಡಿಒ ಹನುಮಂತರಾಯ ಯಂಕಂಚಿ ಹೇಳಿದರು.

ತಾಲೂಕಿನ ವಜ್ರಬಂಡಿ ಗ್ರಾಪಂನಿಂದ ಜಿ.ಜರಕುಂಟಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 2024-25ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆಯಲ್ಲಿ ಮಾತನಾಡಿದರು. ಸಾರ್ವಜನಿಕರು ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು. ಹೀಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಿ ಮಾಹಿತಿ ನೀಡಲಾಗುತ್ತಿದೆ ಎಂದರು.

ಗ್ರಾಪಂ ಸದಸ್ಯರಾದ ಗೀತಾ ಗಾಣದಾಳ, ಬಸವರಾಜ ಹಳ್ಳಿಕೇರಿ, ಸಾಮಾಜಿಕ ಲೆಕ್ಕ ಪರಿಶೋಧಕ ಶರಣಪ್ಪ ನಾಯಕ್, ರುದ್ರಗೌಡ, ಮುಖಂಡರಾದ ತಿರುಪತಿ ರಾಠೋಡ, ನರೇಗಾ ಕಾರ್ಮಿಕರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಪಂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net