ಗಣೇಶೋತ್ಸವ ಪರಿಸರ ಸ್ನೇಹಿಯಾಗಿರಲಿ

Yalaburga Ganesha Festival Meeting
ಯಲಬುರ್ಗಾ ಪೊಲೀಸ್ ಠಾಣೆ ಆವರಣದಲ್ಲಿ ಗೌರಿ-ಗಣೇಶ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಸಿಪಿಐ ಎಂ.ನಾಗರಡ್ಡಿ ಮಾತನಾಡಿದರು.
Published on

ಯಲಬುರ್ಗಾ: ಕೋವಿಡ್ ಮಾರ್ಗಸೂಚಿಯಂತೆ ಈ ಬಾರಿ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ಸಿಪಿಐ ಎಂ.ನಾಗರಡ್ಡಿ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಗೌರಿ-ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ಪಡೆಯಬೇಕು. ಡಿಜೆ ಬಳಕೆ, ಸಮಾರಂಭ, ಮೆರವಣಿಗೆ ನಿಷೇಧಿಸಲಾಗಿದೆ. ವಾರ್ಡ್‌ಗೆ ಒಂದರಂತೆ ಮೂರ್ತಿ ಪ್ರತಿಷ್ಠಾಪಿಸಬಹುದು. ಪಪಂ ಮತ್ತು ಗ್ರಾಪಂ ಸೂಚಿಸಿದ ಸ್ಥಳದಲ್ಲಿ ರಾತ್ರಿ 9ರೊಳಗೆ ವಿಸರ್ಜನೆ ಮಾಡಬೇಕು. ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಕರೊನಾ ಲಸಿಕೆ ಪಡೆಯಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net