ಮಕ್ಕಳ ಪ್ರತಿಭೆ ಗುರುತಿಸುವ ಕೆಲಸವಾಗಲಿ

PRATHIBHA KARANJI
ಯಲಬುರ್ಗಾ ತಾಲೂಕಿನ ಹೊಸಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಯಲಬುರ್ಗಾ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಜಿ.ಪಾಟೀಲ್ ಉದ್ಘಾಟಿಸಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್.ಶ್ಯಾಗೋಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಧರಣಾ ಇದ್ದರು.
Published on

ಯಲಬುರ್ಗಾ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಎಲ್ಲರಿಂದಲೂ ಆಗಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ.ಜಿ.ಪಾಟೀಲ್ ಹೇಳಿದರು.

ತಾಲೂಕಿನ ಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಯಲಬುರ್ಗಾ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಅವರಲ್ಲಿರುವ ಪ್ರತಿಭೆ ಗುರುತಿಸಿದಾಗ ಏನಾದರೂ ಒಂದು ಸಾಧನೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಮಕ್ಕಳಲ್ಲೂ ವಿಶಿಷ್ಟ ಮತ್ತು ವಿಭಿನ್ನ ಕಲೆಗಳು ಒಳಗೊಂಡಿರುತ್ತವೆ. ಅದನ್ನು ಪರಿಚಯಿಸುವ ಕೆಲಸ ನಾವುಗಳು ಮಾಡಬೇಕು ಎಂದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್.ಶ್ಯಾಗೋಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಧರಣಾ ಮಾತನಾಡಿ, ಶಾಲಾ ಹಂತದಲ್ಲಿ ಮಕ್ಕಳ ಪ್ರತಿಭೆ ಗುರುತಿಸಲು ಸರ್ಕಾರ ಇಂತಹ ಕಾರ್ಯಕ್ರಮ ಅನುಷ್ಠಾನಗೊಳಿಸಿದೆ. ಈ ವೇದಿಕೆ ಸಮಾಜ ಮುಖಿಯಾಗಿ ಬೆಳೆಯಲು ಸಹಕಾರಿಯಾಗಿದೆ ಎಂದರು. ಮುಖ್ಯಶಿಕ್ಷಕ ಅಖಂಡಪ್ಪ ಮಾಯಾಚಾರಿ, ಸಿಆರ್‌ಪಿ ವೀರಪ್ಪ ಗಾಣಗೇರ, ಶಿಕ್ಷಕ ಮಹೇಶ ಆರೇರ್ ಮಾತನಾಡಿದರು.

ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಮೂಲಿಮನಿ, ಗ್ರಾಪಂ ಸದಸ್ಯರಾದ ನಗೀನಾಬೇಗಂ ನೂರ್‌ಬಾಷಾ, ಮಹಾದೇವಿ ಶಿರೂರು, ಮಂಜುನಾಥ ಮಾದರ, ಶಿಕ್ಷಕರ ಸಂಘದ ಕಾರ್ಯದರ್ಶಿ ಸಿದ್ದಲಿಂಗಪ್ಪ ಶ್ಯಾಗೋಟಿ, ಶಿಕ್ಷಕರರಾದ ಶರಣಯ್ಯ ಸರಗಣಾಚಾರ್, ಕಳಕಮಲ್ಲಪ್ಪ ಅಂತೂರು, ಖಾದರ್ ಬಾಷಾ, ಚಂದ್ರಪ್ಪ ರಾಜೂರು, ಪ್ರಮುಖರಾದ ಶಿವಕುಮಾರ ನಾಗನಗೌಡ್ರು, ರಾಜಶೇಖರ ಶ್ಯಾಗೋಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net