ಅಪೌಷ್ಟಿಕತೆ ನಿರ್ಮೂಲನೆಗೆ ಕೈಜೋಡಿಸಿ

ANGANAVADI
ಯಲಬುರ್ಗಾದ 15ನೇ ವಾರ್ಡ್‌ನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಸದಸ್ಯರಾದ ಡಾ.ನಂದಿತಾ ಶಿವನಗೌಡ ದಾನರಡ್ಡಿ, ವಸಂತ ಭಾವಿಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಇದ್ದರು.
Published on

ಯಲಬುರ್ಗಾ: ಸರ್ಕಾರಗಳು ಗರ್ಭಿಣಿ, ಬಾಣಂತಿ ಮತ್ತು ಮಕ್ಕಳಲ್ಲಿನ ಅಪೌಷ್ಟಿಕತೆ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮ ಒರಿಗೊಳಿಸಿವೆ. ಅಧಿಕಾರಿಗಳು ಅವುಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು ಎಂದು ಪಪಂ ಸದಸ್ಯೆ ಡಾ.ನಂದಿತಾ ಶಿವನಗೌಡ ದಾನರಡ್ಡಿ ಹೇಳಿದರು.

15ನೇ ವಾರ್ಡ್‌ನಲ್ಲಿ ಕೆಕೆಆರ್‌ಡಿಬಿಯಿಂದ 14.21 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಅಪೌಷ್ಟಿಕತೆ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಶಾಸಕ ಬಸವರಾಜ ರಾಯರಡ್ಡಿ ಅವರು ಸಿಡಿಪಿಒ ಇಲಾಖೆ ನೂತನ ಕಟ್ಟಡ ನಿರ್ಮಾಣಕ್ಕೆ 2 ಕೋಟಿ ರೂ. ನೀಡಿದ್ದಾರೆ ಎಂದರು. ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಸಿಡಿಪಿಒ ಬೆಟದಪ್ಪ ಮಾಳೆಕೊಪ್ಪ, ಪಪಂ ಸದಸ್ಯ ಅಮರೇಶ ಹುಬ್ಬಳ್ಳಿ, ಮುಖ್ಯಾಧಿಕಾರಿ ನಾಗೇಶ, ಅಂಗನವಾಡಿ ಮೇಲ್ವಿಚಾರಕಿಯರಾದ ಲಲಿತಾ ನಾಯಕ, ಶಿವಪುತ್ರಮ್ಮ ಅಂಗಡಿ ಮಾತನಾಡಿದರು.

ಸದಸ್ಯರಾದ ವಸಂತ ಭಾವಿಮನಿ, ಕಳಕಪ್ಪ ತಳವಾರ್, ಅಶೋಕ ಅರಕೇರಿ, ರಿಯಾಜ್ ಅಹ್ಮದ್‌ಖಾಜಿ, ಮುಖಂಡರಾದ ಇಕ್ಬಾಲ್‌ಸಾಬ್ ವಣಗೇರಿ, ಶರಣಪ್ಪ ಗಾಂಜಿ, ಮಲ್ಲು ಜಕ್ಕಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net