ಪ್ರಕೃತಿ ಪೋಷಣೆಯಲ್ಲಿ ಪ್ರಾಮಾಣಿಕ ಪ್ರಯತ್ನವಿರಲಿ

Yelburga parisara jagruti
ಹಿರೇಮ್ಯಾಗೇರಿಯಲ್ಲಿ ರಸ್ತೆ ಬದಿ ನೆಡುತೋಪು ಕಾರ್ಯಕ್ರಮಕ್ಕೆ ಮನರೇಗಾ ಎಡಿ ಹನುಮಂತಗೌಡ ಪಾಟೀಲ್ ಚಾಲನೆ ನೀಡಿದರು. ವಲಯ ಅರಣ್ಯ ಅಧಿಕಾರಿಗಳಾದ ಬಸವರಾಜ ಗೋಗೇರಿ, ಉಪ ವಲಯ ಅರಣ್ಯಾಧಿಕಾರಿಗಳಾದ ಬಾಬುರಾವ್, ಚಿದಾನಂದ ಓಲೆಕಾರ ಇತರರಿದ್ದರು.
Published on

ಯಲಬುರ್ಗಾ: ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿದಾಗ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಎಂದು ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ ಹೇಳಿದರು.

ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ನರೇಗಾ ಯೋಜನೆಯಡಿ ತಾಪಂ ಸಾಮಾಜಿಕ ಅರಣ್ಯ ಇಲಾಖೆ, ಯಲಬುರ್ಗಾ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಸಾಮಾಜಿಕ ಅರಣ್ಯ ಇಲಾಖೆಯಡಿ ಕೈಗೊಂಡಿರುವ ರಸ್ತೆ ಬದಿ ನೆಡುತೋಪು ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು. ಯುವ ಪೀಳಿಗೆ ಹಾಗೂ ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಿ. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರ್ಮಿಕರು ರಸ್ತೆ ಬದಿ ಸಸಿ ನೆಡುತ್ತಿರುವುದು ಮಹತ್ತರ ಕಾರ್ಯವಾಗಿದೆ ಎಂದರು.

ಮುನಿರಾಬಾದ್ ವಲಯ ಅರಣ್ಯ ಅಧಿಕಾರಿ ಸ್ವಾತಿ ಮಾತನಾಡಿ, ಪರಿಸರ ಹಾಳು ಮಾಡಿದ್ದರಿಂದ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಹೀಗಾಗಿ ಉತ್ತಮ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾಮಗಾರಿ ಸ್ಥಳದಲ್ಲಿ ಕೂಲಿಕಾರರೆಲ್ಲ ಕೆಕ್ ಕತ್ತರಿಸಿ ಸಂಭ್ರಮಿಸಿದರು. ವಲಯ ಅರಣ್ಯ ಅಧಿಕಾರಿಗಳಾದ ಬಸವರಾಜ ಗೋಗೇರಿ, ಉಪ ವಲಯ ಅರಣ್ಯಾಧಿಕಾರಿಗಳಾದ ಬಾಬುರಾವ್, ಚಿದಾನಂದ ಓಲೆಕಾರ, ಗ್ರಾಪಂ ಸದಸ್ಯರು, ಪಿಡಿಒ ಬಸವರಾಜ, ಕಾರ್ಯದರ್ಶಿ ಮಹಾಂತೇಶ ಬಾಳಿಕಾಯಿ, ಅರಣ್ಯ ರಕ್ಷಕ ಕಳಕಪ್ಪ ಬ್ಯಾಳಿ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು, ಕಾಯಕ ಬಂಧುಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net