ಪ್ರತಿಯೊಬ್ಬರೂ ಸದೃಢ ರಾಷ್ಟ್ರ ನಿರ್ಮಿಸಲು ಕೈಜೋಡಿಸಿ

Helth camp
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾದಲ್ಲಿ ಏರ್ಪಡಿಸಿದ್ದ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಮಾತನಾಡಿದರು. ಡಿಎಚ್‌ಒ ಡಾ.ಲಿಂಗರಾಜ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಪ್ರಕಾಶ, ಟಿಎಚ್‌ಒ ಡಾ.ರಚನಾ, ಆಡಳಿತ ವೈದ್ಯಾಧಿಕಾರಿಗಳಾದ ಡಾ.ರಮೇಶ, ಡಾ.ಅಮರೇಶ, ದಂತ ವೈದ್ಯಾಧಿಕಾರಿ ಡಾ.ಪುಷ್ಪಾವತಿ, ವೈದ್ಯಾಧಿಕಾರಿ ಡಾ.ಟಿ.ಜೆ.ಘಾಟಗೆ ಇದ್ದರು.
Published on

ಆರೋಗ್ಯ ಮೇಳದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಮನವಿ

ಯಲಬುರ್ಗಾ: ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ್‌ಭವ ಯೋಜನೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಹೇಳಿದರು.

ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಆರೋಗ್ಯ ಇಲಾಖೆ ಏರ್ಪಡಿಸಿದ್ದ ಆರೋಗ್ಯ ಮೇಳ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಲು ಸಾಪ್ತಾಹಿಕ ಆರೋಗ್ಯ ಮೇಳ ಆಯೋಜಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆಯಬೇಕು. ಸದೃಢ ರಾಷ್ಟ್ರ ನಿರ್ಮಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಡಿಎಚ್‌ಒ ಡಾ.ಲಿಂಗರಾಜ ಮಾತನಾಡಿದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಪ್ರಕಾಶ, ಟಿಎಚ್‌ಒ ಡಾ.ರಚನಾ, ಆಡಳಿತ ವೈದ್ಯಾಧಿಕಾರಿಗಳಾದ ಡಾ.ರಮೇಶ, ಡಾ.ಅಮರೇಶ, ದಂತ ವೈದ್ಯಾಧಿಕಾರಿ ಡಾ.ಪುಷ್ಪಾವತಿ, ವೈದ್ಯಾಧಿಕಾರಿ ಡಾ.ಟಿ.ಜೆ.ಘಾಟಗೆ, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net