ಸಮಾಜದಲ್ಲಿ ಮರೆಯಾಗುತ್ತಿದೆ ಮಾನವೀಯತೆ

11 Ylb 02
ಯಲಬುರ್ಗಾ ತಾಲೂಕಿನ ಮುಧೋಳದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಉದ್ಘಾಟಿಸಿದರು. ಸಿವಿಲ್ ನ್ಯಾಯಾಧೀಶೆ ಆಯಿಷಾಬಿ ಮಜೀದ್, ಗ್ರಾಪಂ ಅಧ್ಯಕ್ಷೆ ಹನುಮವ್ವ ವಡ್ಡರ, ತಹಸೀಲ್ದಾರ್ ವಿಠ್ಠಲ ಚೌಗಲಾ, ಸಹಾಯಕ ಸರ್ಕಾರಿ ಅಭಿಯೋಜಕ ಎ.ಐ.ಹಾದಿಮನಿ, ಸಿಡಿಪಿಒ ಸಿಂಧು ಎಲಿಗಾರ್ ಇತರರಿದ್ದರು.
Published on

ಯಲಬುರ್ಗಾ: ಪ್ರತಿಯೊಬ್ಬರೂ ಕಾನೂನಿನ ಸಾಮಾನ್ಯ ಜ್ಞಾನ ಹೊಂದಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಹೇಳಿದರು.

ಮಹಿಳಾ ದಿನಾಚರಣೆ ನಿಮಿತ್ತ ಮುಧೋಳ ಗ್ರಾಮದ ತ್ರಿಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಮಾನವೀಯತೆ ಕಳೆದು ಹೋಗುತ್ತಿದೆ. ಮಕ್ಕಳ ಮೇಲಿನ ಕಾಳಜಿ ಪಾಲರಲ್ಲಿ ಕಾಣುತ್ತಿಲ್ಲ. ಈ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಎಲ್ಲರೂ ಕಾನೂನಿನ ಜ್ಞಾನ ಅರಿಯಬೇಕು. ಕಾನೂನಿನ ಚೌಕಟ್ಟಿನಲ್ಲಿ ಬದುಕು ಸಾಗಿಸಬೇಕು. ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಬೇಕು ಎಂದರು.

ಸಿವಿಲ್ ನ್ಯಾಯಾಧೀಶೆ ಆಯಿಷಾಬಿ ಮಜೀದ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವಿದೆ. ಉತ್ತಮ ಶಿಕ್ಷಣ ಪಡೆಯುವ ಮೂಲಕ ಮುಖ್ಯವಾಹಿನಿಗೆ ಬರಬೇಕು. ವಿವಿಧ ಕೌಶಲಗಳ ತರಬೇತಿ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು. ಶೋಷಣೆ, ದೌರ್ಜನ್ಯ ತಡೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಗ್ರಾಪಂ ಅಧ್ಯಕ್ಷೆ ಹನುಮವ್ವ ಯಲ್ಲಪ್ಪ ವಡ್ಡರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಾಷುಸಾಬ್ ಆರಬಳ್ಳಿನ್, ತಹಸೀಲ್ದಾರ್ ವಿಠ್ಠಲ ಚೌಗಲಾ, ಸಹಾಯಕ ಸರ್ಕಾರಿ ಅಭಿಯೋಜಕ ಎ.ಐ.ಹಾದಿಮನಿ, ಸಿಡಿಪಿಒ ಸಿಂಧು ಎಲಿಗಾರ್, ವಕೀಲ ಎಚ್.ಎಚ್.ಹಿರೇಮನಿ, ಪಿಡಿಒ ರವಿಕುಮಾರ್ ಲಿಂಗಣ್ಣನವರ್, ಗ್ರಾಮ ಆಡಳಿತಾಧಿಕಾರಿ ಕುಮಾರ್ ಪರಸಾಪುರ, ಪ್ರಮುಖರಾದ ಶಕುಂತಲಾದೇವಿ ಮಾಲಿಪಾಟೀಲ್, ಕೆ.ಜಿ.ಪಲ್ಲೇದ, ಆರೋಗ್ಯ ನಿರೀಕ್ಷಣಾಧಿಕಾರಿ ಶಂಕ್ರಣ್ಣ ಅಂಗಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net