ಕೆರೆ ಹೂಳೆತ್ತುವ ಕೆಲಸಕ್ಕೆ ಕೈಜೋಡಿಸಿ

Yelburga lake cleen
ಯಲಬುರ್ಗಾ ತಾಲೂಕಿನ ತೊಂಡಿಹಾಳದಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಗ್ರಾಪಂ ಅಧ್ಯಕ್ಷ ಲಿಂಗರಾಜ ಉಳ್ಳಾಗಡ್ಡಿ, ತಾಲೂಕು ಯೋಜನಾಧಿಕಾರಿ ಸತೀಶ್.ಟಿ, ಪಿಡಿಒ ಕೆ.ಬಸವರಾಜ, ಕೆರೆ ಸಮಿತಿ ಅಧ್ಯಕ್ಷ ಪರಪ್ಪ ಅಂಗಡಿ, ಗ್ರಾಪಂ ಸದಸ್ಯರಾದ ನಿಂಗನಗೌಡ, ಗೀತಾ ತುಪ್ಪದ, ಕಾಳಪ್ಪ ಬಡಿಗೇರ, ಅಂದಾನಗೌಡ, ಬಸನಗೌಡ ಮಾಲಿಪಾಟೀಲ್ ಇತರರಿದ್ದರು.
Published on

ಯಲಬುರ್ಗಾ: ಕೆರೆಗಳ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡುಗೆ ಅಪಾರ ಎಂದು ಕರಮುಡಿ ಗ್ರಾಪಂ ಅಧ್ಯಕ್ಷ ಲಿಂಗರಾಜ ಉಳ್ಳಾಗಡ್ಡಿ ಹೇಳಿದರು.

ತಾಲೂಕಿನ ತೊಂಡಿಹಾಳ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಗ್ರಾಪಂನಿಂದ ಶುಕ್ರವಾರ ಹಮ್ಮಿಕೊಂಡಿದ್ದ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರದ ಜತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ ಸಾವಿರಾರು ಕೆರೆಗಳನ್ನು ಅಭಿವೃದ್ಧಿ ಪಡಿಸಿರುವುದು ಉತ್ತಮ ಬೆಳವಣಿಗೆ. ಕೇವಲ ಸಾಲ ಸೌಲಭ್ಯಕ್ಕೆ ಸೀಮಿತವಾಗದೆ. ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. ಗ್ರಾಮಸ್ಥರು ಕೆರೆ ಹೂಳೆತ್ತುವ ಕೆಲಸಕ್ಕೆ ಕೈಜೋಡಿಸಿ ಎಂದರು.

ತಾಲೂಕು ಯೋಜನಾಧಿಕಾರಿ ಸತೀಶ್.ಟಿ, ಪಿಡಿಒ ಕೆ.ಬಸವರಾಜ, ಕೆರೆ ಸಮಿತಿ ಅಧ್ಯಕ್ಷ ಪರಪ್ಪ ಅಂಗಡಿ, ಗ್ರಾಪಂ ಸದಸ್ಯರಾದ ನಿಂಗನಗೌಡ, ಗೀತಾ ತುಪ್ಪದ, ಕಾಳಪ್ಪ ಬಡಿಗೇರ, ಅಂದಾನಗೌಡ, ಬಸನಗೌಡ ಮಾಲಿಪಾಟೀಲ್, ದೇವಪ್ಪ ವಡ್ಡರ್, ಕೃಷಿ ಮೇಲ್ವಿಚಾರಕ ಪ್ರಸನ್ನ ಕುಮಾರ್, ವಲಯ ಮೇಲ್ವಿಚಾರಕ ರಮೇಶ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗೀತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net