ಮಾನಸಿಕ, ದೈಹಿಕ ಸಮತೋಲನ ಅಗತ್ಯ- ತಾಪಂ ಇಒ ಸಂತೋಷ ಪಾಟೀಲ್ ಸಲಹೆ

161122 Yalaburga Sports
ಕಲಬುರ್ಗಿಯಲ್ಲಿ ಆಯೋಜಿಸಿದ್ದ ಕೆಆರ್‌ಇಐಎಸ್ ಶಾಲೆಗಳ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ನಿವೇದಿತಾ 200 ಮೀ. ಓಟದಲ್ಲಿ (ಪ್ರಥಮ ಸ್ಥಾನ), ಬಳೂಟಗಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಹುಲಿಗೆಮ್ಮ ಮಾಟರಂಗಿ (ದ್ವಿತೀಯ ಸ್ಥಾನ) ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳೊಂದಿಗೆ ಪ್ರಾಚಾರ್ಯೆ ಅಂಜುಮ್, ದೈಹಿಕ ಶಿಕ್ಷಣ ಶಿಕ್ಷಕ ಶಂಕರ ಇದ್ದಾರೆ.
Published on

ಯಲಬುರ್ಗಾ: ಗ್ರಾಮೀಣ ಪರಂಪರೆ ಬಿಂಬಿಸುವ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದು ತಾಪಂ ಇಒ ಸಂತೋಷ ಪಾಟೀಲ್ ಹೇಳಿದರು. ತಾಲೂಕಿನ ಬೇವೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ, ತಾಪಂ ಹಾಗೂ ಕೂಡಲಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಿಂದ ಬುಧವಾರ ಆಯೋಜಿಸಿದ್ದ ಗ್ರಾಪಂ ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಟೋಟಗಳಿಂದ ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಮಕ್ಕಳು ಕ್ರೀಡೆಯಿಂದ ದೂರ ಉಳಿಯದೇ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕೂಡಲಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಕ್ರೀಡಾಕೂಟ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು. ಬಿಇಒ ಪದ್ಮನಾಭ ಕರ್ಣಂ, ಸಂಸ್ಥೆಯ ಕಾರ್ಯದರ್ಶಿ ದ್ಯಾಮಣ್ಣ ಗೊಂದಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಸೋಮಲಿಂಗಪ್ಪ ಕೊಳಜಿ ಅಧ್ಯಕ್ಷತೆ ವಹಿಸಿದ್ದರು.

ಎಸ್ಡಿಎಂಸಿ ಅಧ್ಯಕ್ಷ ಭೀಮಣ್ಣ ಕೊಳಜಿ, ಸಂಸ್ಥೆಯ ಅಧ್ಯಕ್ಷ ಕೂಡ್ಲೆಪ್ಪ ಗೊಂದಿ, ಮುಖ್ಯಶಿಕ್ಷಕ ಗಣೇಶ ಪಾಂಚಾಳ, ಪಿಡಿಒ ಅಬ್ದುಲ್ ಗಫಾರ್, ಬಿಆರ್‌ಪಿ ಶಿವಪ್ಪ ಉಪ್ಪಾರ, ವೈದ್ಯಾಧಿಕಾರಿ ನೇತ್ರಾವತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net