ಗ್ರಾಮೀಣರ ಆರೋಗ್ಯ ಸುಧಾರಣೆಗೆ ಆದ್ಯತೆ

DINESH GUNDURAW
ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ ಹಾಗೂ ಬಂಡಿ-ಕಡಬಲಕಟ್ಟಿ ಹಳ್ಳಕ್ಕೆ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಚಾಲನೆ ನೀಡಿದರು. ಶಾಸಕ ಬಸವರಾಜ ರಾಯರಡ್ಡಿ, ತುಂಗಭದ್ರಾ ಕಾಡಾ ಅಧ್ಯಕ್ಷ ಹಸನ್‌ಸಾಬ್ ದೋಟಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ಯಂಕಣ್ಣ ಯರಾಶಿ, ಎ.ಜಿ.ಭಾವಿಮನಿ ಇದ್ದರು.
Published on

ಯಲಬುರ್ಗಾ: ರಾಜ್ಯ ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಬಂಡಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ ಹಾಗೂ ಬಂಡಿ-ಕಡಬಲಕಟ್ಟಿ ಹಳ್ಳಕ್ಕೆ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಬುಧವಾರ ಮಾತನಾಡಿದರು. ತಾಯಿ-ಮಗುವಿನ ಆರೋಗ್ಯ ಸುರಕ್ಷತೆಗೆ ಸರ್ಕಾರ ಯೋಜನೆ ರೂಪಿಸಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುಧಾರಣೆಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು.

ಶಾಸಕ ಬಸವರಾಜ ರಾಯರಡ್ಡಿ ಅವರ ಪ್ರಯತ್ನದಿಂದ ಕ್ಷೇತ್ರಕ್ಕೆ ಮೂರು ಆರೋಗ್ಯ ಕೇಂದ್ರ ಮಂಜೂರು ಆಗಿದ್ದು, ಶೀಘ್ರ ಕಟ್ಟಡ ನಿರ್ಮಾಣವಾಗಲಿವೆ. ಈಗಾಗಲೇ ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ನಮ್ಮಿಂದಾಗದ ಕೆಲಸ ರಾಯರಡ್ಡಿಗೆ ಆಗುತ್ತವೆ. ಸಿಎಂ ಆರ್ಥಿಕ ಸಲಹೆಗಾರರಾಗಿರುವುದೇ ಇದಕ್ಕೆ ಕಾರಣ ಎಂದರು.

ಶಾಸಕ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಕೆಆರ್‌ಡಿಬಿಯಿಂದ ಮೂರು ವರ್ಷ ಅನುದಾನ ಒದಗಿಸಲಾಗುತ್ತದೆ. ವಿಶೇಷ ಪ್ರಕರಣದಡಿ ಆದೇಶ ಹೊರಡಿಸಿದ್ದರಿಂದ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗಿದೆ. ಬಂಡಿ-ಕಡಬಲಕಟ್ಟಿ ಚೆಕ್ ಡ್ಯಾಮ್ ನಿರ್ಮಾಣಕ್ಕೆ 1.50 ಕೋಟಿ ರೂ., ಯಲಬುರ್ಗಾ-ಬಂಡಿ ರಸ್ತೆ ಅಭಿವೃದ್ದಿಗೆ 19 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದರು.

ತುಂಗಭದ್ರಾ ಕಾಡಾ ಅಧ್ಯಕ್ಷ ಹಸನ್‌ಸಾಬ್ ದೋಟಿಹಾಳ, ಗ್ರಾಪಂ ಅಧ್ಯಕ್ಷೆ ರತ್ನಮ್ಮ ಮಲ್ಲಪ್ಪ ವಣಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಡಿಎಚ್‌ಒ ಟಿ.ಲಿಂಗರಾಜು, ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ್ ಪಾಟೀಲ್, ಟಿಎಚ್‌ಒ ಅಮರೇಶ ನಾಗರಾಳ, ಪಿಡಬ್ಲುಡಿ ಎಇಇ ಮಲ್ಲಿಕಾರ್ಜುನ, ಪ್ರಮುಖರಾದ ಎ.ಜಿ.ಭಾವಿಮನಿ, ವೀರನಗೌಡ ಬಳೂಟಗಿ, ಯಂಕಣ್ಣ ಯರಾಶಿ, ಕೆರಿಬಸಪ್ಪ ನಿಡಗುಂದಿ, ಈರಪ್ಪ ಕುಡಗುಂಟಿ, ಬಿ.ಎಂ.ಶಿರೂರ, ಶರಣಪ್ಪ ಉಪ್ಪಾರ, ಶರಣಪ್ಪ ಕೊಪ್ಪಳ, ರಾಮಣ್ಣ ಸಾಲಭಾವಿ, ಸಂಗಣ್ಣ ತೆಂಗಿನಕಾಯಿ, ಗ್ರಾಪಂ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net