ಹೋಬಳಿ ಕೇಂದ್ರ ಕಚೇರಿ ಶೀಘ್ರ ಆರಂಭ

VIKSHANE
ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ ಹೋಬಳಿ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಶಾಸಕ ಬಸವರಾಜ ರಾಯರಡ್ಡಿ ಗುರುವಾರ ವೀಕ್ಷಿಸಿದರು. ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.
Published on

ಯಲಬುರ್ಗಾ: ತಾಲೂಕಿನ ಬೇವೂರು ಗ್ರಾಮದಲ್ಲಿ ನೂತನ ಹೋಬಳಿ ಕೇಂದ್ರ ಕಚೇರಿ ಶೀಘ್ರವೇ ಆರಂಭವಾಗಲಿದೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ಬೇವೂರಿನಲ್ಲಿ ಹೋಬಳಿ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಿಸಿ ಗುರುವಾರ ಮಾತನಾಡಿದರು. ಕಟ್ಟಡ ಕಾಮಗಾರಿ ಪೂರ್ಣಗೊಂಡ ನಂತರ ಕಚೇರಿ ಆರಂಭಿಸಿ, ಈ ಭಾಗದ ಜನರಿಗೆ ಸರ್ಕಾರಿ ಸೇವೆ ಒದಗಿಸಲಾಗುತ್ತದೆ. ಜತೆಗೆ ಅಗತ್ಯ ಸಿಬ್ಬಂದಿ ನಿಯೋಜನೆಗೂ ಕ್ರಮ ವಹಿಸಲಾಗಿದೆ. ಗ್ರಾಮಸ್ಥರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಕೋರಿದರು.

ಉತ್ತಮ ಆಡಳಿತ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿವೆ. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನಸಾಮಾನ್ಯರ ಹಿತ ಕಾಪಾಡಿದೆ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ಅನುದಾನ ಕೊರತೆ ಇಲ್ಲ ಎಂದು ರಾಯರಡ್ಡಿ ತಿಳಿಸಿದರು. ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net