ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ ಗುತ್ತಿಗೆದಾರರಿಗೆ ಶಾಸಕ ಹಾಲಪ್ಪ ಆಚಾರ್ ಸೂಚನೆ

10052021 Yelburga MLA Halappa Achar -road work
Published on

ಯಲಬುರ್ಗಾ: ಕ್ಷೇತ್ರದಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಹಾಲಪ್ಪ ಆಚಾರ್ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಪಟ್ಟಣದ ಸ್ನಾತಕೋತ್ತರ ಕೇಂದ್ರಕ್ಕೆ ರಸ್ತೆ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ಮಾಡಿ ಮಾತನಾಡಿದರು. ಪಟ್ಟಣದಲ್ಲಿ ಸ್ನಾತಕೋತ್ತರ ಕೇಂದ್ರ ಸುಸಜ್ಜಿತವಾಗಿ ನಿರ್ಮಾಣವಾಗುತ್ತಿದ್ದು, ಜಿಲ್ಲೆಗೆ ಮಾದರಿ ಕಟ್ಟಡವಾಗಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರಕ್ಕೆ ತೆರಳಲು 2.54 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ 1.47 ಕೋಟಿ ರೂ. ವೆಚ್ಚದಲ್ಲಿ ವಜ್ರಬಂಡಿಯಿಂದ ಯಲಬುರ್ಗಾ-ಬಂಡಿ ರಸ್ತೆವರೆಗೆ ಮರು ಡಾಂಬರೀಕರಣ ನಡೆಯಲಿದೆ. ಕಾಮಗಾರಿಯಲ್ಲಿ ಗುಣಮಟ್ಟತೆ ಕಂಡುಕೊಳ್ಳದಿದ್ದರೆ, ಅಧಿಕಾರಿ ಮತ್ತು ಗುತ್ತಿಗೆದಾರರನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಪ್ರಮುಖರಾದ ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಶಿವಕುಮಾರ ನಾಗಲಾಪುರಮಠ, ಅರವಿಂದಗೌಡ ಪಾಟೀಲ್, ಶಿವಪ್ಪ ವಾದಿ, ಶಿವನಗೌಡ ಬನ್ನಪ್ಪಗೌಡ್ರ, ಮಾರುತಿ ಗಾವರಾಳ, ಈರಪ್ಪ ಬಣಕಾರ್, ಸಿದ್ರಾಮೇಶ ಬೇಲೇರಿ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಭಾವಿಮನಿ, ಸದಸ್ಯರಾದ ರೇವಣಪ್ಪ ಹಿರೇಕುರುಬರ್, ಕಳಕಪ್ಪ ತಳವಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net