ಮೂರ್ತಿ ಭಗ್ನಗೊಳಿಸಿದವರನ್ನು ಗಡಿ ಪಾರು ಮಾಡಿ

181221 Yalaburga Karave Protest
ನಾಡಧ್ವಜ ಸುಟ್ಟವರು ಹಾಗೂ ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲಬುರ್ಗಾದಲ್ಲಿ ಗ್ರೇಡ್ 2 ತಹಸೀಲ್ದಾರ್ ನಾಗಪ್ಪ ಸಜ್ಜನ್‌ಗೆ ಕರವೇ ಯುವಸೇನೆ ತಾಲೂಕು ಘಟಕ ಮನವಿ ಸಲ್ಲಿಸಿತು.
Published on

ಯಲಬುರ್ಗಾ: ನಾಡಧ್ವಜ ಸುಟ್ಟ ಕಿಡಿಗೇಡಿಗಳನ್ನು ಬಂಧಿಸಬೇಕು. ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರವೇ ಯುವಸೇನೆ ತಾಲೂಕು ಘಟಕದಿಂದ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಬರೆದ ಮನವಿಯನ್ನು ಗ್ರೇಡ್ 2 ತಹಸೀಲ್ದಾರ್ ನಾಗಪ್ಪ ಸಜ್ಜನ್‌ಗೆ ಶನಿವಾರ ಸಲ್ಲಿಸಲಾಯಿತು.

ತಾಲೂಕು ಅಧ್ಯಕ್ಷ ಶಿವಕುಮಾರ ನಾಗನಗೌಡ್ರ ಮಾತನಾಡಿ, ಎಂಇಎಸ್ ಹಾಗೂ ಶಿವಸೇನೆಯವರು ಬೆಳಗಾವಿಯಲ್ಲಿ ಪದೇ ಪದೆ ಕ್ಯಾತೆ ತೆಗೆಯುತ್ತಿದ್ದಾರೆ. ಕನ್ನಡಿಗರ ಭಾವನೆಗಳನ್ನು ಘಾಸಿಗೊಳಿಸುತ್ತಿರುವವರನ್ನು ಕೂಡಲೇ ಬಂಧಿಸಬೇಕು. ಅನಗೋಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದವರನ್ನು ಗಡಿಪಾರು ಮಾಡಬೇಕು. ಎಂಇಎಸ್ ಮುಖಂಡರಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕನ್ನಡಪರ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದು ಅಕ್ಷಮ್ಯ. ಸರ್ಕಾರ ಕೂಡಲೇ ಮೊಕದ್ದಮೆ ಕೈಬಿಟ್ಟು, ಎಲ್ಲ ಕನ್ನಡ ಪರ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಪದಾಧಿಕಾರಿಗಳಾದ ಭೀಮೇಶ ಬಂಡಿವಡ್ಡರ್, ಘನವಂತೇಶ ಚನ್ನದಾಸರ್, ಮಹೇಶ ಜಾಧವ್, ಪ್ರವೀಣ ಅರಬರ, ಪರಶುರಾಮ ಜಾಧವ್, ಬಂಗಾರಪ್ಪ, ಬಾಳನಗೌಡ ಪೊಲೀಸ್‌ಪಾಟೀಲ್, ಮಂಜುನಾಥ ಕಮ್ಮಾರ, ಬಸವರಾಜ ಮದ್ಲೂರು, ನಾಗರಾಜ ಪೂಜಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net