ಬಿ-ಖಾತೆ ಪಡೆಯಲು ದಾಖಲೆಗಳನ್ನು ಸಲ್ಲಿಸಿ

Untitled design (20)
Published on

ಯಲಬುರ್ಗಾ: ಅನಧಿಕೃತ ಬಡಾವಣೆಯ ನಿವೇಶನದ ಮಾಲೀಕರು ಅಗತ್ಯ ದಾಖಲೆ ಸಲ್ಲಿಸಿ ಬಿ-ಖಾತೆ ಪಡೆದುಕೊಳ್ಳಬೇಕು ಎಂದು ಪಪಂ ಮುಖ್ಯಾಧಿಕಾರಿ ನಾಗೇಶ ಹೇಳಿದರು.

ಪಟ್ಟಣದ ವಿವಿಧ ಕಾಲನಿಗಳಿಗೆ ಸೋಮವಾರ ಭೇಟಿ ನೀಡಿ ಬಿ-ಖಾತೆ ಕುರಿತು ಜಾಗೃತಿ ಮೂಡಿಸಿ ಮಾತನಾಡಿದರು. ಬಿ-ಖಾತೆ ನೀಡುವುದನ್ನು ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲು ಸರ್ಕಾರ ಸೂಚಿಸಿದೆ. 2024 ಸೆ.10 ಕ್ಕಿಂತ ಮುಂಚಿನ ಆಸ್ತಿಗಳಿಗೆ ಈ ಕಾಯ್ದೆಯು ಅನ್ವಯವಾಗಲಿದೆ. ಆಸ್ತಿಯ ಮಾಲೀಕರು, ಪಟ್ಟಣ ಪಂಚಾಯಿತಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಏಳು ದಿನದೊಳಗೆ ಬಿ-ಖಾತೆಯನ್ನು ಪಡೆಯಬಹುದು. ಜನರ ಅನುಕೂಲಕ್ಕಾಗಿ 4 ಜನ ಕರವಸೂಲಿಗಾರರನ್ನು ನೇಮಕ ಮಾಡಲಾಗಿದೆ. ಅವರು ಮನೆ-ಮನೆಗೆ ಭೇಟಿ ನೀಡಿ ಪೂರಕ ದಾಖಲೆ ಸಂಗ್ರಹಿಸಿ ನೋಂದಣಿಗೆ ಕ್ರಮ ಕೈಗೊಳ್ಳಿದ್ದಾರೆ ಎಂದರು.

ಸಾರ್ವಜನಿಕರು ಮಧ್ಯವರ್ತಿಗಳ ಮೊರೆ ಹೋಗಬಾರದು. ನೇರವಾಗಿ ಪಟ್ಟಣ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು. ಸಹಾಯವಾಣಿ ಸಂಖ್ಯೆ 9743500589 ಆರಂಭಿಸಲಾಗಿದ್ದು, ಸದುಪಯೋಗಪಡಿಸಿಕೊಳ್ಳಬೇಕು. ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಒಟ್ಟು 8937 ನಿವೇಶನ ಪೈಕಿ 2123 ನಿವೇಶನಗಳು ಅನಧಿಕೃತವಾಗಿವೆ ಎಂದು ಮಾಹಿತಿ ನೀಡಿದರು. ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net