

ಯಲಬುರ್ಗಾ: ತಾಲೂಕಿನ ಆಯಾ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮನೋವ್ಯಾಧಿಯಿಂದ ಬಳಲುತ್ತಿರುವವರನ್ನು ಆಶಾ ಕಾರ್ಯಕರ್ತೆಯರು ಗುರುತಿಸಿ ಚಿಕಿತ್ಸೆಗೆ ಒಳಪಡಿಸುತ್ತಿದ್ದಾರೆ ಎಂದು ಮನೋವೈದ್ಯೆ ಲಕ್ಷ್ಮೀದೇವಿ ಪಾಟೀಲ್ ಹೇಳಿದರು.
ತಾಲೂಕಿನ ಹಿರೇವಂಕಲಕುಂಟಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: ನಾಳೆ ಬೂವನಹಳ್ಳಿಯಲ್ಲಿ ಬೃಹತ್ ಆರೋಗ್ಯ ಶಿಬಿರ
ಪ್ರತಿಯೊಬ್ಬರೂ ಸಕಾರಾತ್ಮಕ, ಧನಾತ್ಮಕ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಯಾರೇ ಮನೋವ್ಯಾಧಿಯಿಂದ ಬಳಲುತ್ತಿದ್ದರೂ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಆಡಳಿತ ವೈದ್ಯಾಧಿಕಾರಿಗಳಾದ ದಯಾನಂದಸ್ವಾಮಿ, ಡಾ.ರಮೇಶ, ದಂತವೈದ್ಯೆ ಪುಷ್ಪಾವತಿ, ಆಯುಷ್ ವೈದ್ಯಾಧಿಕಾರಿ ತುಳಜಾರಾಂ ಘಾಟಗೆ, ಮನೋಶಾಸ್ತ್ರಜ್ಞೆ ಪುಷ್ಪಾ ತೆರೇಸಾ, ಎನ್‌ಸಿಡಿ ವೈದ್ಯಾಧಿಕಾರಿ ಭೂಷಣ, ಸಿಎಚ್‌ಒ ವರ್ತ್ಯಾರಡ್ಡಿ ನಾಯ್ಕ, ಸಾಮಾಜಿಕ ಕಾರ್ಯಕರ್ತ ಮಂಜುನಾಥ ನೆರಬೆಂಚಿ ಇತರರಿದ್ದರು.