

ಯಲಬುರ್ಗಾ: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿದ್ದು, ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಹೇಳಿದರು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೊಲೀಸ್ ಠಾಣೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಇದರಲ್ಲಿ ಸವಾರರ ಪ್ರಾಣ ರಕ್ಷಣೆಯ ಉದ್ದೇಶ ಅಡಗಿದೆ. ಹೀಗಾಗಿ ಎಲ್ಲ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇದರಿಂದ ತಮ್ಮ ಅಮೂಲ್ಯ ಜೀವ ರಕ್ಷಣೆ ಜತೆಗೆ ಕುಟುಂಬದವರ ಹಿತ ಕಾಪಾಡಿದಂತಾಗುತ್ತದೆ ಎಂದರು. ಪಿಎಸ್‌ಐ ವಿಜಯ ಪ್ರತಾಪ, ಸಿಬ್ಬಂದಿ ಬಾಳನಗೌಡ ಪಾಟೀಲ್ ಹಾಗೂ ಸಾರ್ವಜನಿಕರು ಇದ್ದರು.