3 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ತಹಸೀಲ್ದಾರ್ ಚಾಲನೆ

Yalaburga CC Road Work
ಯಲಬುರ್ಗಾದ ತಹಸಿಲ್ ಕಚೇರಿ ಆವರಣದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ತಹಸೀಲ್ದಾರ್ ಶ್ರೀಶೈಲ ತಳವಾರ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು.
Published on

ಯಲಬುರ್ಗಾ: ಪಟ್ಟಣದ ತಹಸಿಲ್ ಕಚೇರಿ ಆವರಣದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ತಹಸೀಲ್ದಾರ್ ಶ್ರೀಶೈಲ ತಳವಾರ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು.

ಪಟ್ಟಣ ಪಂಚಾಯಿತಿಯ 3 ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣವಾಗುತ್ತಿದ್ದು, ಕಚೇರಿಗೆ ಬರುವ ಸಾರ್ವಜನಿಕರಿಗೆ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಅನುಕೂಲವಾಗಲಿದೆ. ಈ ಮುಂಚೆ ಸಮರ್ಪಕ ಆವರಣ, ರಸ್ತೆ ಇಲ್ಲದೆ ಮಳೆ ಬಂದರೆ ನೀರು ನಿಂತು, ಜನರಿಗೆ ಸಮಸ್ಯೆಯಾಗುತ್ತಿತ್ತು. ತುಂಬಾ ದಿನಗಳಿಂದ ಇದ್ದ ಸಮಸ್ಯೆ ಬಗೆಹರಿಯಲಿದೆ. ಗುತ್ತಿಗೆದಾರರು ಕಾಮಗಾರಿ ಗುಣಮಟ್ಟದಿಂದ ನಡೆಸಬೇಕು ಎಂದರು.

ಪಪಂ ಸದಸ್ಯರಾದ ಕಳಕಪ್ಪ ತಳವಾರ್, ವಸಂತ ಭಾವಿಮನಿ, ಅಮರೇಶ ಹುಬ್ಬಳ್ಳಿ, ಹನುಮಂತ ಭಜಂತ್ರಿ, ಪ್ರಮುಖರಾದ ದೊಡ್ಡಯ್ಯ ಗುರುವಿನ್, ಗುತ್ತಿಗೆದಾರರಾದ ಕಳಕೇಶ ಸೂಡಿ, ಎಸ್.ಎಸ್.ಪಾಟೀಲ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net