

ಯಲಬುರ್ಗಾ: ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆದಿಗುರು ಶಂಕರಾಚಾರ್ಯರ ಆದರ್ಶ ಎಲ್ಲರೂ ಮೈಗೂಡಿಸಿಕೊಳ್ಳಿ ಎಂದು ತಾಪಂ ನೌಕರ ಬಸವರಾಜ ಹಳ್ಳಿ ಹೇಳಿದರು.
ಪಟ್ಟಣದ ತಾಪಂ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಂಕರಾಚಾರ್ಯರು ಸಮಾಜ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಕಂದಾಚಾರ, ಮೌಢ್ಯತೆ ವಿರುದ್ಧ ಸಮರ ಸಾರಿದರು. ಅದ್ವೈತ ಸಿದ್ಧಾಂತದ ಮೂಲಕ ಆತ್ಮ ಪರಮಾತ್ಮದ ಪರಿಕಲ್ಪನೆಯನ್ನು ತಿಳಿಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ಗುರುಪೀಠಗಳನ್ನು ಸ್ಥಾಪಿಸಿ ಗುರುಪಂರಂಪರೆಗೆ ನಾಂದಿ ಹಾಡಿದ್ದಾರೆ. ಅವರ ತತ್ವಾದರ್ಶ ಇಂದಿನ ಸಮಾಜಕ್ಕೆ ಮಾದರಿ ಎಂದರು.