

ಯಲಬುರ್ಗಾ: ಸರ್ ಸಿ.ವಿ.ರಾಮನ್ ಜನ್ಮದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸಲಾಗುತ್ತದೆ ಎಂದು ಶಿಕ್ಷಕ ಬಸವರಾಜ ಮುಗಳಿ ಹೇಳಿದರು. ತಾಲೂಕಿನ ಬಂಡಿಹಾಳ ಗ್ರಾಮದ ಬಾಲಪ್ಪ ಚಿಗರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಿ.ವಿ.ರಾಮನ್ ಅವರು ವಿಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜನ್ಮದಿನ ನಿಮಿತ್ತ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ರಸಪ್ರಶ್ನೆ, ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆ, ಮಾದರಿ ತಯಾರಿಕೆ, ಉಪನ್ಯಾಸ ಮತ್ತು ತರಬೇತಿ ಆಯೋಜಿಸಲಾಗುತ್ತಿದೆ ಎಂದರು. ಎಸ್ಡಿಎಂಸಿ ಅಧ್ಯಕ್ಷ ಶರಣು ಕಳಸಪ್ಪನವರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಲಾಗುತ್ತಿದೆ ಎಂದರು.