ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ

TEACHERS
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ಯಲಬುರ್ಗಾ ಬಿಇಒ ಅಶೋಕ ಗೌಡರ್‌ಗೆ ಮನವಿ ಸಲ್ಲಿಸಲಾಯಿತು. ಕುಕನೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹೇಶ ಅಭರದ, ಎರಡೂ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಸ್.ವಿ.ಧರಣಾ, ಮಾರುತೇಶ ತಳವಾರ್, ಕಾರ್ಯದರ್ಶಿ ಸಿದ್ದಲಿಂಗಪ್ಪ ಶ್ಯಾಗೋಟಿ ಇದ್ದರು.
Published on

ಯಲಬುರ್ಗಾ: ವೃಂದ ಮತ್ತು ನೇಮಕಾತಿ ನಿಯಮಗಳಿಂದಾಗಿ ಆಗಿರುವ ಅನ್ಯಾಯ ಸರಿಪಡಿಸದಿದ್ದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಬಹಿಷ್ಕರಿಸುವುದಾಗಿ ಎಚ್ಚರಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ಪಟ್ಟಣದ ಬಿಇಒ ಅಶೋಕ ಗೌಡರ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಆ.28ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಿರುವ ಕರಡು ನಿಯಮಗಳಿಗೆ ಆಕ್ಷೇಪಣೆ ಹಾಗೂ 2017ರ ವೃಂದ ಮತ್ತು ನೇಮಕಾತಿ ನಿಯಮಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗಿದೆ. ಈ ಕುರಿತು ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಭೆ ನಡೆಸಿ ಅನ್ಯಾಯ ಸರಿಪಡಿಸುವ ಭರವಸೆ ನೀಡಿದ್ದರು. ಇದುವರೆಗೂ ಯಾವುದೇ ಸಭೆ ನಡೆದಿಲ್ಲ. ಮುಖ್ಯಮಂತ್ರಿಗಳು ಸೆ.4ರಂದು ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಸಿಗದೇ ಇದ್ದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಬಹಿಷ್ಕರಿಸುವುದಾಗಿ ತೀರ್ಮಾನಿಸಲಾಗಿದೆ ಎಂದು ಕುಕನೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹೇಶ ಅಭರದ, ಎರಡೂ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಸ್.ವಿ.ಧರಣಾ, ಮಾರುತೇಶ ತಳವಾರ್, ಕಾರ್ಯದರ್ಶಿ ಸಿದ್ದಲಿಂಗಪ್ಪ ಶ್ಯಾಗೋಟಿ, ಶಿಕ್ಷಕರಾದ ಶರಣಯ್ಯ ಸರಗಣಾಚಾರ್, ಸಂಗಪ್ಪ ರಾಜೂರ, ಬಸವರಾಜ ಹವಳೆ, ಮೆಹಬೂಬ್ ಬಾದಶಹ, ಅಶೋಕ ಮಾದಿನೂರ, ಸುರೇಶ ಮಡಿವಾಳರ್, ಅಬ್ದುಲ್ ಖದೀರ್, ಲಿಂಗರಡ್ಡೆಪ್ಪ ಕರಮುಡಿ, ಹುಲಿಗೆಮ್ಮ ವಜ್ರಬಂಡಿ ಇತರರು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net