ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಲಿ

UDGHATANE
ಯಲಬುರ್ಗಾದ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಒಂದು ದಿನದ ಕಾರ್ಯಾಗಾರವನ್ನು ಕೊಪ್ಪಳದ ಭೂಮಿ ಸ್ಟಡಿ ಸರ್ಕಲ್ ನಿರ್ದೇಶಕ ಮಹೇಶ ಪಟ್ಟೇದ ಉದ್ಘಾಟಿಸಿದರು. ಪ್ರಾಚಾರ್ಯ ಕೆ.ಎಚ್.ಛತ್ರದ, ಸಹಾಯಕ ಪ್ರಾಧ್ಯಾಪಕರಾದ ಎಚ್.ಎಂ.ಗುಡಿಹಿಂದಿನ, ವೀರೇಶ ಗಜೇಂದ್ರಗಡ, ಶಶಿಕುಮಾರ, ಎಸ್.ವಿನೋದ ಇದ್ದರು.
Published on

ಯಲಬುರ್ಗಾ: ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೊಪ್ಪಳದ ಭೂಮಿ ಸ್ಟಡಿ ಸರ್ಕಲ್ ನಿರ್ದೇಶಕ ಮಹೇಶ ಪಟ್ಟೇದ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಪ್ಪಳದ ಭೂಮಿ ಸ್ಟಡಿ ಸರ್ಕಲ್, ಐಕ್ಯುಎಸಿ ಮತ್ತು ಉದ್ಯೋಗ ಮಾಹಿತಿ ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಬುಧವಾರ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಣಿಯಾಗಬೇಕು. ಆಯಾ ಪಠ್ಯಕ್ರಮಕ್ಕೆ ತಕ್ಕಂತೆ ತಯಾರಿ ನಡೆಸುವ ಮೂಲಕ ಪರೀಕ್ಷೆ ಎದುರಿಸಿದರೆ ಪದವಿ ಹಂತ ಮುಗಿಯುವ ಒಳಗೆ ಸರ್ಕಾರಿ ಹುದ್ದೆಗೆ ಆಯ್ಕೆಯಾಗಬಹುದು ಎಂದರು.

ಪ್ರಾಚಾರ್ಯ ಕೆ.ಎಚ್.ಛತ್ರದ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಮಾಣಿಕತೆಯಿಂದ ಅಭ್ಯಾಸ ಮಾಡಿದರೆ ಅನೇಕ ಹುದ್ದೆ ಪಡೆಯುವುದರ ಜತೆಗೆ ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಬಹುದು ಎಂದರು.

ಸಹಾಯಕ ಪ್ರಾಧ್ಯಾಪಕರಾದ ಎಚ್.ಎಂ.ಗುಡಿಹಿಂದಿನ, ವೀರೇಶ ಗಜೇಂದ್ರಗಡ, ಶಶಿಕುಮಾರ, ಎಸ್.ವಿನೋದ, ಶರಣಪ್ಪ ತಳವಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net