ಮಹಿಳೆಯರಿಗೆ ಕಾನೂನು ತಿಳಿವಳಿಕೆ ಅವಶ್ಯ; ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಹೇಳಿಕೆ

241120 Yalaburga Legal Education Programmee
ಯಲಬುರ್ಗಾ ನ್ಯಾಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಚಾಲನೆ ನೀಡಿದರು.
Published on

ಯಲಬುರ್ಗಾ: ಮಹಿಳೆಯರಿಗಾಗಿ ಜಾರಿಗೊಂಡ ಕಾನೂನುಗಳ ತಿಳಿವಳಿಕೆ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಹೇಳಿದರು. ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಂಗವಾಗಿ ಮಹಿಳಾ ದಿನ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಮರ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೌರ್ಜನ್ಯ, ಶೋಷಣೆ ತಡೆಯಲು ಮಹಿಳೆಯರ ರಕ್ಷಣೆಗಾಗಿ ಮಹಿಳಾ ಕಾನೂನುಗಳನ್ನು ಜಾರಿಗೆ ತರಲಾಗಿದ್ದು, ಇದರಿಂದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಂಡು ಯಶಸ್ಸು ಕಾಣಲು ಸಾಧ್ಯವಾಗಿದೆ ಎಂದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಸಂಗಮೇಶ ವಾದಿ ಅಧ್ಯಕ್ಷತೆ ವಹಿಸಿದ್ದರು. ಸಿಡಿಪಿಒ ವಿರೂಪಾಕ್ಷಯ್ಯ ಹಿರೇಮಠ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲ ಎ.ಎಂ.ಶಂಕರಗೌಡ, ವಕೀಲರಾದ ಮಲ್ಲನಗೌಡ ಪಾಟೀಲ್, ಎ.ಎಂ.ಪಾಟಲ್, ಅಂಗನವಾಡಿ ಮೇಲ್ವಿಚಾರಕರಾದ ಲಲಿತಾ ನಾಯ್ಕರ್, ರಾಜೇಶ್ವರಿ, ನ್ಯಾಯಾಲಯ ಸಿಬ್ಬಂದಿ ರಾಘವೇಂದ್ರ ಕುಲಕರ್ಣಿ, ವಿನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net