ಯಳಂದೂರು ಶೇ. 90.54 ಮತದಾನ

Oplus_131072
ಯಳಂದೂರು ಪಟ್ಟಣದ ಮತಗಟ್ಟೆಯಲ್ಲಿ ಸೋಮವಾರ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿ ವಾಪಸ್ಸಾಗುತ್ತಿರುವ ಮತದಾರರು.
Published on

ಯಳಂದೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಯಳಂದೂರು ತಾಲೂಕಿನಲ್ಲಿ ಶೇ. 90.54 ರಷ್ಟು ಮತದಾನ ನಡೆಯಿತು.

ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಯನ್ನು ಇರಿಸಲಾಗಿತ್ತು. ಒಟ್ಟು ತಾಲೂಕಿನಲ್ಲಿ 201 ಶಿಕ್ಷಕ ಮತದಾರರು ಇದ್ದು, 182 ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದರು. ಇದರಲ್ಲಿ 134 ಪುರುಷರು ಹಾಗೂ 48 ಮಹಿಳೆಯರು ಮತದಾನ ಮಾಡಿದರು.

ಬೆಳಗ್ಗೆ ಮಂದಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನ ಆಗುತ್ತಿದ್ದಂತೆ ಚುರುಕು ಪಡೆದುಕೊಂಡಿತು. ಮತಗಟ್ಟೆಯ ಮುಂಭಾಗ ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಅವರ ಬೆಂಬಲಿಗರು ಶಾಮಿಯಾನ ಹಾಕಿಕೊಂಡು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯ ಅಲ್ಲಲ್ಲಿ ಗೋಚರಿಸುತ್ತಿತ್ತು. ಶಾಸಕ ಎ.ಆರ್. ಕೃಷ್ಣಮೂರ್ತಿ, ಮಾಜಿ ಶಾಸಕರಾದ ಎಸ್.ಜಯಣ್ಣ, ಎನ್.ಮಹೇಶ್ ಸೇರಿದಂತೆ ಅನೇಕರು ಸ್ಥಳಕ್ಕೆ ಭೇಟಿ ನೀಡಿದ್ದರು. ಮತಗಟ್ಟೆಯ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net