ರಾಷ್ಟ್ರಮಟ್ಟದ ಕಬಡ್ಡಿ ತಂಡಕ್ಕೆ ಗುರುಕಿರಣ್ ಆಯ್ಕೆ

14 m.gurukirana 03
Published on

ಯಳಂದೂರು: ಪಟ್ಟಣದ ಎಸ್‌ಡಿವಿಎಸ್ ವಿದ್ಯಾ ಸಂಸ್ಥೆಯ 10ನೇ ತರಗತಿಯ ಕೃಷ್ಣಪುರ ಗ್ರಾಮದ ವಿದ್ಯಾರ್ಥಿ ಎಂ.ಗುರುಕಿರಣ್ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಷನ್ ವತಿಯಿಂದ ಇತ್ತೀಚೆಗೆ ಉಡುಪಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಚಾಮರಾಜನಗರ ಜಿಲ್ಲಾ ಮಟ್ಟದ ತಂಡದಿಂದ ಎಂ.ಗುರುಕಿರಣ್ ಸೇರಿ ಒಟ್ಟು 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ರಾಜ್ಯ ಮಟ್ಟದ ಜೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಎಂ. ಗುರುಕಿರಣ್ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಕೆಸ್ತೂರು ಮಲ್ಲಿಕಾರ್ಜುನ ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವರ್ಗ ಹಾಗೂ ಚಾಮರಾಜನಗರ ಅಮೆಚೂರ್ ಕಬಡ್ಡಿ ಫೆಡರೇಷನ್ ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net