

ಯಳಂದೂರು: ಪಟ್ಟಣ ಜೆಎಸ್‌ಎಸ್ ಬಾಲಿಕಾ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿಯ ಪರೀಕ್ಷೆಯಲ್ಲಿ ಶೇ.78ರಷ್ಟು ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ನೋಂದಣಿಯಾಗಿದ್ದ ಒಟ್ಟು 80 ವಿದ್ಯಾರ್ಥಿಗಳ ಪೈಕಿ 62 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಮಹದೇವಮ್ಮ ಒಟ್ಟು 553 ಅಂಕಗಳನ್ನು ಪಡೆದಿದ್ದು, ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದಿದ್ದಾರೆ. ಚೈತ್ರಾ 539 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.