ಉಪ್ಪಾರ ಸೇನೆಯಿಂದ ವಿಶ್ವ ಪರಿಸರ ದಿನಾಚರಣೆ

Oplus_0
Oplus_0
Published on

ಯಳಂದೂರು: ತಾಲೂಕಿನ ಹೊನ್ನೂರು-ಬೀಚಹಳ್ಳಿ ಗ್ರಾಮದಲ್ಲಿ ಉಪ್ಪಾರ ಸೇನೆ ವತಿಯಿಂದ ಇತ್ತೀಚೆಗೆ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.

ಸಂಘದ ಸದಸ್ಯ ಪ್ರಸಾದ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಸರದ ಮೇಲೆ ಮನುಷ್ಯ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದಾನೆ. ನಿತ್ಯ ಅರಣ್ಯ ನಾಶವಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಕಾಡನ್ನು ಕಡಿಯಲಾಗುತ್ತಿದೆ. ರಸ್ತೆ ವಿಸ್ತರಣೆ ನೆಪದಲ್ಲಿ ಮರಗಳ ಮಾರಣಹೋಮ ನಡೆಯುತ್ತಿದೆ. ಇದರ ಪರಿಣಾಮವನ್ನು ಇಡೀ ಜಗತ್ತು ಅನುಭವಿಸುತ್ತಿದೆ. ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಇದು ಭೂಮಿ ಮೇಲಿರುವ ಎಲ್ಲ ಜೀವ ವೈವಿಧ್ಯವನ್ನು ಅವಸಾನದ ಅಂಚಿಗೆ ಕರೆದೊಯ್ಯುವ ಸಾಧ್ಯತೆ ಇದೆ. ಅನೇಕ ಅಪರೂಪದ ಜೀವಿಗಳು ಈಗಾಗಲೇ ಭೂಮಿಯಿಂದ ಕಣ್ಮರೆಯಾಗುತ್ತಿವೆ. ಹಾಗಾಗಿ ಇಲ್ಲಿರುವ ಜೀವ ವೈವಿಧ್ಯತೆಯನ್ನು ಕಾಪಾಡಿಕೊಳ್ಳಬೇಕಾದರೆ ನಾವು ಪರಿಸರವನ್ನು ರಕ್ಷಿಸಿಕೊಳ್ಳಬೇಕಿದೆ. ನಮ್ಮ ನೆಲಜಲದ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದರು.
ಗ್ರಾಮದ ಯಜಮಾನ ಗಣೇಶ್‌ಶೆಟ್ಟಿ, ಪ್ರಸಾದ್, ಜವರಶೆಟ್ಟಿ, ಸೋಮ, ನಂಜುಂಡಸ್ವಾಮಿ, ರಾಜಣ್ಣ, ನಿಂಗರಾಜು, ಶಿವರಾಜು ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net