ಮನೆಯಲ್ಲಿ ಕಲಿಕೆ ವಾತಾವರಣ ನಿರ್ಮಾಣವಾಗಲಿ

Oplus_0
Oplus_0
Published on

ಯಳಂದೂರು: ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತಾಲೂಕಿನ ಗುಂಬಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.

ಮುಖ್ಯ ಶಿಕ್ಷಕ ನಿಂಗೇಗೌಡ ಮಾತನಾಡಿ, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಕೃಷ್ಣಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಾಜು ತಮ್ಮ ಪುತ್ರಿ ನಿಸರ್ಗರಾಜ್ ಹೆಸರಿನಲ್ಲಿ ನಗದು ಬಹುಮಾನ ನೀಡುತ್ತಿದ್ದಾರೆ. ಈ ಬಾರಿ ಮಾದೇಶ, ತುಳಸಿ ಹಾಗೂ ಪ್ರಹ್ನವಿ ಸನ್ಮಾನಕ್ಕೆ ಭಾಜನರಾಗಿದ್ದಾರೆ ಎಂದರು.

ಶಾಲಾ ಮಕ್ಕಳನ್ನು ಶಿಕ್ಷಕರು ನಿರಂತರವಾಗಿ ಕಲಿಕೆಯಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಇದರೊಂದಿಗೆ ಪಾಲಕರೂ ತಮ್ಮ ಮನೆಯಲ್ಲಿ ಕಲಿಕೆಯ ವಾತಾವರಣ ನಿರ್ಮಾಣ ಮಾಡಿ ಮಕ್ಕಳ ವ್ಯಾಸಂಗಕ್ಕೆ ಸಹಕರಿಸಬೇಕು. ಕಲಿಕೆಯಲ್ಲಿ ವಿಶೇಷ ಸಾಧನೆ ಮಾಡಿದ ಮಕ್ಕಳಿಗೆ ಇಂತಹ ವ್ಯಕ್ತಿಗಳು, ಸಂಘ-ಸಂಸ್ಥೆಗಳು ಉತ್ತೇಜಿಸುವುದರಿಂದ ಮಕ್ಕಳಲ್ಲಿ ಕಲಿಕೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ರಾಜು ಅವರ ಸೇವೆ ಗಣನೀಯ ಎಂದು ಬಣ್ಣಿಸಿದರು.

ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೀರಭದ್ರಸ್ವಾಮಿ, ಗುಂಬಳ್ಳಿ ಗ್ರಾಪಂ ಅಧ್ಯಕ್ಷೆ ಮೀನಾ, ದೈಹಿಕ ಪರಿವೀಕ್ಷಕ ಲಿಂಗರಾಜು, ಸಿಆರ್‌ಪಿ ರೇಚಣ್ಣ, ಕೃಷ್ಣಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಾಜು ಶಿಕ್ಷಕರಾದ ಮಹದೇವಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಗುಂಬಳ್ಳಿ ರಾಜಣ್ಣ, ವಿ. ಕಿರಣ್ ಎಲ್.ಎನ್. ಲಕ್ಷ್ಮೀ, ಎಸ್.ಮಂಜುನಾಥ್, ಬಿ.ವಿ.ನಾಗರತ್ನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net