ಸುಶೀಲಮ್ಮ ಮದ್ದೂರು ಗ್ರಾಪಂ ಅಧ್ಯಕ್ಷೆ

Oplus_131072
Oplus_131072
Published on

ಯಳಂದೂರು: ತಾಲೂಕಿನ ಮದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸುಶೀಲಮ್ಮ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 16 ಸದಸ್ಯರಿರುವ ಈ ಪಂಚಾಯಿತಿಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ 12 ಸದಸ್ಯರು ಹಾಜರಿದ್ದರು. ಈ ಹಿಂದೆ ಅಧ್ಯಕ್ಷರಾಗಿದ್ದ ಭಾಗ್ಯಾ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಸ್ಥಾನ ತೆರವಾಗಿತ್ತು. ಇದಕ್ಕೆ ಸುಶೀಲಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಇವರ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ಕೇಶವಮೂರ್ತಿ ಅಧಿಕೃತವಾಗಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಶೀಲಮ್ಮ, ಮದ್ದೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಪಂಚಾಯಿತಿಯ ಇತರ ಸದಸ್ಯರ ಸಹಯೋಗದೊಂದಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಯತ್ನಿಸುತ್ತೇನೆ ಎಂದರು. ಗ್ರಾಪಂ ಸದಸ್ಯರಾದ ನಂದಿನಿ, ಸುಧಾಮಣಿ, ಚಂದ್ರಕಲಾ, ಚಂದ್ರಮ್ಮ, ಭಾಗ್ಯಾ, ಮಂಜುಳಾ, ಪ್ರಕಾಶ್, ಅವಿನಾಶ್, ಶಶಿಕುಮಾರ್, ಪರಮೇಶ್, ಮಲ್ಲಿಕಾರ್ಜುನ ಪಿಡಿಒ ನಟರಾಜು, ಸಿಬ್ಬಂದಿ ಪ್ರಸನ್ನ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net