ಯಳಂದೂರು: ತಾಲೂಕಿನ ಕಂದಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟರು.
ಕಂದಹಳ್ಳಿ ಗ್ರಾಮದ ನಿವಾಸಿ ಮಾದಮ್ಮ(75) ಮೃತರು. ಇವರು ಜು.9 ರಂದು ಕುರಿ ಮೇಯಿಸಲು ಎಂದಿನಂತೆ ರಸ್ತೆಯ ಬದಿಯಲ್ಲಿ ಹೋಗುತ್ತಿದ್ದಾಗ ಸಂತೇಮಹಳ್ಳಿ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಮಾದಮ್ಮ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ 108 ತುರ್ತು ವಾಹನದ ಮೂಲಕ ಯಳಂದೂರು ಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ. ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ. ಶುಕ್ರವಾರ ಬೆಳಗ್ಗೆ ಗಾಯಾಳು ಮಾದಮ್ಮ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.