ಯಳಂದೂರು: ತಾಲೂಕಿನ ಕಂದಹಳ್ಳಿ ಗ್ರಾಮದ ನಾಯಕರ ಬಡಾವಣೆಯಲ್ಲಿ ಮಳೆಗೆ ಮನೆಯ ಗೋಡೆ ಕುಸಿದಿದೆ.
ಬಡಾವಣೆಯ ಸಿದ್ದನಾಯಕ ಅವರ ಮನೆ ಗೋಡೆ ಕುಸಿದಿರುವುದು. ಮನೆಯಲ್ಲಿ ಐವರು ವಾಸವಿದ್ದರು. ಇತ್ತೀಚೆಗೆ ಸುರಿದ ಮಳೆಯಿಂದ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.