ಆರ್ಥಿಕವಾಗಿ ಸದೃಢರಾಗಲು ರೈತರು ಉಪ ಕಸುಬಿಗೆ ಒತ್ತು ನೀಡಲಿ

Oplus_131072
Oplus_131072
Published on

ಯಳಂದೂರು: ರೈತರು ಕೃಷಿಯ ಜತೆ ಕುರಿ, ಕೋಳಿ ಸಾಕಣೆಯಂತಹ ಉಪ ಕಸುಬುಗಳನ್ನು ಮಾಡುವುದರಿಂದ ಆರ್ಥಿಕವಾಗಿ ಚೇತರಿಸಿಕೊಳ್ಳಬಹುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ 2022-23 ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ ಯೋಜನೆಯಡಿ ನೀಡುವ ಕುರಿ ಮರಿಗಳನ್ನು ವಿತರಿಸಿ ಮಾತನಾಡಿದರು. ಒಬ್ಬ ಫಲಾನುಭವಿಗೆ 3 ಕುರಿಗಳನ್ನು ನೀಡಲಾಗುತ್ತಿದ್ದು, ಸರ್ಕಾರದಿಂದ ಸಬ್ಸಿಡಿ ರೂಪದಲ್ಲಿ 8 ಸಾವಿರ ರೂ. ನೀಡಲಾಗುತ್ತದೆ. ರೈತ 8 ಸಾವಿರ ರೂ. ಪಾವತಿ ಮಾಡಬೇಕು. ಸರ್ಕಾರದ ಯೋಜನೆಯನ್ನು ಬಳಕೆಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.

ಕೆಲವರು ಕುರಿ, ಕೋಳಿ, ಹಂದಿ ಸಾಕಣೆಯ ಮೂಲಕ ಉತ್ತಮ ಆದಾಯಗಳಿಸುತ್ತಿದ್ದಾರೆ. ತಾಲೂಕಿನಲ್ಲಿ 90 ರೈತರು ಈ ಯೋಜನೆಗೆ ಆಯ್ಕೆಯಾಗಿದ್ದು, ಒಬ್ಬರಿಗೆ ತಲಾ ಮೂರರಂತೆ ಒಟ್ಟು 270 ಕುರಿಮರಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ತಹಸೀಲ್ದಾರ್ ಜಯಪ್ರಕಾಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಮೃತೇಶ್ವರ್, ಕೃಷಿ ಅಧಿಕಾರಿ ವೆಂಕಟರಂಗಶೆಟ್ಟಿ, ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಪ.ಪಂ. ಸದಸ್ಯ ಮಹೇಶ್, ರಂಗನಾಥ್, ಮಂಜು, ಲಿಂಗರಾಜಮೂರ್ತಿ, ಮಲ್ಲು, ಪಶು ವೈದ್ಯ ಡಾ.ಶಿವರಾಜು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯರಿಯೂರು ಪ್ರಕಾಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net