ಆಕಸ್ಮಿಕ ಬೆಂಕಿ ಬಿದ್ದು ಕಬ್ಬು ನಾಶ

Oplus_131072
Oplus_131072
Published on

ಯಳಂದೂರು: ತಾಲೂಕಿನ ದುಗ್ಗಹಟ್ಟಿ ಗ್ರಾಮದ ಕಬ್ಬಿನ ಬೆಳೆಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಕಬ್ಬು ಭಸ್ಮವಾಗಿದೆ.

ಗ್ರಾಮದ ಜವರಯ್ಯ ಹಾಗೂ ರಂಗಯ್ಯ ಅವರ ಜಮೀನಿನಲ್ಲಿ ಬೆಳೆದಿದ್ದ 9 ತಿಂಗಳ ಕಬ್ಬು ಇದಾಗಿದ್ದು, ಬುಧವಾರ ರಾತ್ರಿ 7.30 ರಲ್ಲಿ ಕಬ್ಬಿಗೆ ಬೆಂಕಿ ಬಿದ್ದಿದೆ. ಈ ಸಂದರ್ಭದಲ್ಲಿ ಅಕ್ಕಪಕ್ಕದ ಜಮೀನಿನವರು ಸೇರಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಿ ಜವರಯ್ಯ ಅವರ 30 ಗುಂಟೆ ಹಾಗೂ ರಂಗಯ್ಯ ಅವರ 20 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net