ಜಿಲ್ಲಾ ಮಟ್ಟದ ಪುರುಷರ ಖೋಖೋ ಪಂದ್ಯಾವಳಿ

Published on

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿರುವ ಡಾ.ಭೀಮ್‌ರಾವ್ ರಾಮ್‌ಜೀ ಪ್ರೌಢಶಾಲೆ ಆವರಣದಲ್ಲಿ ಅ.3 ರಂದು ಜಿಲ್ಲಾ ಮಟ್ಟದ ಪುರುಷರ ಖೋ ಖೋ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.

ದೈಹಿಕ ಶಿಕ್ಷಣ ಶಿಕ್ಷಕ ಎಲ್.ರಾಜಶೇಖರ್ ಸ್ಮರಣಾರ್ಥ ಪಂದ್ಯಾವಳಿ ಆಯೋಜಿಸಲಾಗಿದೆ. ವಿಜೇತ ತಂಡಗಳಿಗೆ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಮಾಹಿತಿಗಾಗಿ ಮೊ: 8095174752/ 8431988801 ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net