

ಯಲಬುರ್ಗಾ: ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡುತ್ತಿದೆ. ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕೆಲಸಗಳಿಗೆ ಜನ ಸಹಕಾರ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಕೆಕೆಆರ್‌ಡಿಬಿ ಅನುದಾನದಡಿ 1.47ಕೋಟಿ ರೂ.ವೆಚ್ಚದಲ್ಲಿ 6ನೂತನ ಕೊಠಡಿಗಳ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಹೊಸದಾಗಿ 12 ಪ್ರೌಢ, ಎರಡು ವಸತಿ ಶಾಲೆ, 6 ಪದವಿ ಪೂರ್ವ ಕಾಲೇಜು ಆರಂಭವಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಹೆಚ್ಚು ಅನುಕೂಲವಾಗಿದೆ. ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಅನುದಾನ ಬಂದಿದೆ. ಅಭಿವೃದ್ಧಿ ಕೆಲಸಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಸಿಡಿಸಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲಿ ಮಾತನಾಡಿ, ಮಹಿಳಾ ಕಾಲೇಜಗೆ 6ಕೊಠಡಿಗಳು ಮಂಜೂರಾಗಿವೆ. ಗುತ್ತಿಗೆದಾರರು ಕಟ್ಟಡ ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಬೇಕು ಎಂದರು. ಜಿಪಂ ಎಇಇ ಶ್ರೀಧರ ತಳವಾರ್, ಮುಖಂಡ ಶರಣಪ್ಪ ಗಾಂಜಿ, ಕಾಲೇಜಿನ ಪ್ರಭಾರ ಪ್ರಾಚಾರ್ಯ ಪರಶುರಾಮ ಇತರರಿದ್ದರು.