ದೇವದಾಸಿ ಪದ್ಧತಿ ಹೋಗಲಾಡಿಸಲು ಸಹಕರಿಸಿ

Untitled design (42)
Published on

ಯಲಬುರ್ಗಾ: ದೇವದಾಸಿ ಪದ್ಧತಿ ನಿರ್ಮೂಲನೆಯಲ್ಲಿ ಮೊದಲ ತಾಲೂಕನ್ನಾಗಿ ಪರಿವರ್ತಿಸುವುದು ಎಲ್ಲರ ಜವಾಬ್ದಾರಿ ಎಂದು ಸಿಡಿಪಿಒ ಬೆಟದೇಶ ಮಾಳೇಕೊಪ್ಪ ಹೇಳಿದರು.

ಪಟ್ಟಣದ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಮುಕ್ತ ದೇವದಾಸಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. 1982ರಲ್ಲಿ ದೇವದಾಸಿ ಸಮರ್ಪಣಾ ನಿಷೇಧ ಕಾಯ್ದೆ ಬಂದರೂ ಎರಡು ಪ್ರಕರಣಗಳು ದಾಖಲೆಯಾಗಿವೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾಜಿ ದೇವದಾಸಿಯರಿಗೆ ಬರುತ್ತಿದೆ ಎಂದರು.

ಪಪಂ ಮುಖ್ಯಾಧಿಕಾರಿ ಬಿ.ನಾಗೇಶ ಮಾತನಾಡಿ, ನಿವೇಶನ ಇಲ್ಲದ ವಿಮುಕ್ತ ದೇವದಾಸಿ ಮಹಿಳೆಗೆ 15 ದಿನಗಳಲ್ಲಿ ನಿವೇಶನ ಕಲ್ಪಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ನೊಂದ ಮಹಿಳೆಯರ ಸರ್ಕಾರಿ ಸೇವಾ ಸೌಲಭ್ಯಗಳ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ವಿಜಯಕುಮಾರ, ಆರೋಗ್ಯಾಧಿಕಾರಿ ಡಾ.ಅಮರೇಶ ನಾಗರಾಳ, ಎಎಸ್‌ಐ ಪ್ರಕಾಶ, ವಕೀಲೆ ಸಾವಿತ್ರಿ ಗೊಲ್ಲರ, ಸಖಿ ಒನ್ ಸ್ಟಾಪ್ ಸೆಂಟರ್‌ನ ಆಡಳಿತಾಧಿಕಾರಿ ಯಮುನಾ ಬೆಸ್ತರ್, ಅಪರ ಸರ್ಕಾರಿ ವಕೀಲ ಎಸ್.ಮಲ್ಲನಗೌಡ ಪಾಟೀಲ್, ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಪೂರ್ಣಿಮಾ ಯೋಳಬಾವಿ, ತಾಲೂಕು ಅನುಷ್ಠಾನ ಅಧಿಕಾರಿಗಳಾದ ದಾದೇಸಾಬ, ಸಕ್ಕುಬಾಯಿ, ರೇಣುಕಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net