

ಯಲಬುರ್ಗಾ: ಮನುಕುಲದ ಏಳಿಗೆಗಾಗಿ ಮಹರ್ಷಿ ವಾಲ್ಮೀಕಿ ಅವರ ಸಂದೇಶಗಳು ದಾರಿ ದೀಪವಾಗಿದೆ ಎಂದು ಶಿಕ್ಷಕ ಸಂತೋಷ ಕುಲಕರ್ಣಿ ಹೇಳಿದರು.
ತಾಲೂಕಿನ ಹುಲೇಗುಡ್ಡ ಗ್ರಾಮದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ರಾಮಾಯಣದಲ್ಲಿ ಆದರ್ಶ ವ್ಯಕ್ತಿಯ ಚಿತ್ರಣ, ಕೌಟುಂಬಿಕ, ಮಾನವೀಯತೆ ಹಾಗೂ ಸಾಮಾಜಿಕ ಮೌಲ್ಯ ಕಾಣಬಹುದು. ಜೀವನ ಮೌಲ್ಯಗಳು ಹಾಗೂ ಸಂದೇಶವನ್ನು ಮಹಾಕಾವ್ಯಗಳಲ್ಲಿ ಕಾಣಬಹುದು. ವಾಲ್ಮೀಕಿ ಮಹರ್ಷಿ ಅವರ ನೀತಿ ಉಕ್ತಿಗಳು ಉತ್ತಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದರು.
ಅಖಿಲ ಭಾರತ ವಾಲ್ಮೀಕಿ ಮಹಾಸಭಾ ತಾಲೂಕು ಪ್ರಧಾನ ಕಾರ್ಯದರ್ಶಿ ಚನ್ನಬಸವ ಕುಲಕರ್ಣಿ ಮಾತನಾಡಿ, ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯ ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶ್ರೀರಾಮನನ್ನು ವಿಶ್ವಾದ್ಯಂತ ಪರಿಚಯಿಸಿ ಮನುಕುಲದ ಹಿತಕ್ಕಾಗಿ ಜೀವಿಸಿ ಸಮುದಾಯಕ್ಕೆ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.
ಪ್ರಮುಖರಾದ ಶರಣಗೌಡ ಮಾಲಿಪಾಟೀಲ್ ದುರಗನಗೌಡ ಪೊಲೀಸ್‌ಪಾಟೀಲ್ ಶಂಕರಗೌಡ ಸಾಲಭಾವಿ, ಗುರುನಾಥ ಗಡ್ಡದ, ರಮೇಶ ಗೆದಗೇರಿ, ಎಎಸ್‌ಐ ಬಸವರಾಜ ಮಾಲಗಿತ್ತಿ ಇತರರಿದ್ದರು.