

ಯಲಬುರ್ಗಾ: ತಾಲೂಕಿನ ಅನೇಕ ಕೆರೆಗಳನ್ನು ತುಂಬಿಸುವ ಯೋಜನೆ ಹಾಕಿಕೊಂಡಿದ್ದು, ಇದರಿಂದ ಅಂತರ್ಜಲ ಹೆಚ್ಚಾಗಿ ರೈತರ ಪಂಪ್‌ಸೆಟ್‌ಗಳಿಗೆ ನೀರು ನಿರಂತರವಾಗಿ ಬರುತ್ತದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಪಪಂನಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕೆಂಪು ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ಇರುವ ಕೆರೆ ಅಷ್ಟೇ ಅಲ್ಲದೆ ರೈತರು ಭೂಮಿ ಒದಗಿಸಿದರೆ ಇನ್ನೂ ಅನೇಕ ಕೆರೆಗಳನ್ನು ತುಂಬಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಕೆರೆ ಅವಶ್ಯಕತೆ ಇರುವುದನ್ನು ಮನಗಂಡು ಮುಖ್ಯಮಂತ್ರಿ ಗಮನಕ್ಕೆ ತಂದು ಹೊಸ ಕೆರೆಗಳಿಗೆ ಅನುಮತಿ ಪಡೆಯಲಾಗಿದೆ. ಅದರಂತೆ ಈ ಕೆಂಪು ಕೆರೆ ಅತ್ಯಂತ ವಿಶಾಲವಾಗಿದ್ದು, ಸಂಪೂರ್ಣವಾಗಿ ಕೆರೆ ಭರ್ತಿಯಾಗಿದ್ದು ಸಂತಸ ತಂದಿದೆ ಎಂದರು.
ಪಪಂ ಮುಖ್ಯಾಧಿಕಾರಿ ನಾಗೇಶ, ಸದಸ್ಯರಾದ ರೇವಣೆಪ್ಪ ಹಿರೇಕುರುಬರ, ಡಾ.ನಂದಿತಾ ದಾನರಡ್ಡಿ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ಕೆರಿಬಸಪ್ಪ ನಿಡುಗುಂದಿ, ಪ್ರಮುಖರಾದ ಶರಣಪ್ಪ ಗಾಂಜಿ, ಶಿವನಗೌಡ ದಾನರೆಡ್ಡಿ, ಆನಂದ ಉಳ್ಳಾಗಡ್ಡಿ, ಮಲ್ಲು ಜಕ್ಕಲಿ, ಈಶ್ವರ ಅಟಮಾಳಗಿ, ಶರಣಮ್ಮ ಪೂಜಾರ, ಜ್ಯೋತಿ ಪಲ್ಲೇದ ಇರರಿದ್ದರು.