ಯಾಪಲದಿನ್ನಿಯಲ್ಲಿ ಕುಂಭ-ಕಳಸ ಮೆರವಣಿಗೆ

ylb-2
ಯಾಪಲದಿನ್ನಿ ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ನಿಮಿತ್ತ ಮಹಿಳೆಯರಿಂದ ಕುಂಭ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
Published on

ಯಲಬುರ್ಗಾ: ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ವಾಲ್ಮೀಕಿ ಸಮಾಜದಿಂದ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ 101 ಕುಂಭ ಕಳಸ ಮೆರವಣಿಗೆ ನೆರವೇರಿತು.

ಬೆಳಗ್ಗೆ ಗ್ರಾಮದಲ್ಲಿ ಹುತ್ತಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಹಾಗೂ ಕುಂಭ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮೆರವಣಿಗೆ ಮೂಲಕ ತೆರಳಿ ಶ್ರೀ ಮಹರ್ಷಿ ಭಗಿರಥ ವೃತ್ತ, ಬಸವೇಶ್ವರ ದೇವಸ್ಥಾನ, ಮಾರುತೇಶ್ವರ ಹಾಗೂ ಶುಖಮುನಿ ಮಹಾಸ್ವಾಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಲಾಯಿತು.

ನಂತರ ವಾಲ್ಮೀಕಿ ಸಮುದಾಯ ಭವನದಲ್ಲಿ ಜಮಾಯಿಸಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಅನ್ನ ಸಂತರ್ಪಣೆ ಮಾಡಲಾಯಿತು. ಗ್ರಾಮದ ಯುವಕರು, ಹಿರಿಯರು, ಮಹಿಳೆಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net