ಯಳಜಿತ್ ಶಾಲೆಗೆ ನೂರರ ಸಂಭ್ರಮ

yaljith
ಬೈಂದೂರು ವಲಯದ ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ
Published on

ಬೈಂದೂರು: ಬೈಂದೂರು ವಲಯದ ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2024ರ ನವೆಂಬರ್ ತಿಂಗಳಲ್ಲಿ ನೂರು ವರ್ಷ ತುಂಬಲಿದೆ. ಶತಮಾನ ಪೂರೈಸಲಿರುವ ಶಾಲೆಯಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ನಡೆಸಲು ಶಾಲಾ ಶತಮಾನೋತ್ಸವ ಸಮಿತಿ ನಿರ್ಣಯಿಸಿದೆ. ಅದರ ಅಂಗವಾಗಿ ಶಾಲೆಯಲ್ಲಿ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು, ಕಟ್ಟಡದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಯಳಜಿತ್ ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ವೈ.ಮಂಗೇಶ್ ಶಾನುಭಾಗ್ ವಿಜಯವಾಣಿಯೊಂದಿಗೆ ಮಾತನಾಡಿ, ಶಾಲೆಯಲ್ಲಿ ಕಲಿತಿರುವ ಸಾವಿರಾರು ವಿದ್ಯಾರ್ಥಿಗಳು ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಶತಮಾನೋತ್ಸವ ಸಂಭ್ರಮ ಅವಿಸ್ಮರಣೀಯವಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಅಭಿವೃದ್ಧಿ ಕಾರ್ಯ ಹಮ್ಮಿಕೊಳ್ಳಲಾಗಿದ್ದು. ಆರ್ಥಿಕ ಸಹಾಯ ಮಾಡುವುದರ ಮೂಲಕ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.

ಶಾಲಾ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಂಜಯ್ಯ ಪೂಜಾರಿ ಮಾತನಾಡಿ, ಸುಮಾರು ನೂರು ವರ್ಷ ತುಂಬಲಿರುವ ಯಳಜಿತ್ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಹಾಗಾಗಿ ಶಾಲೆಯಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕ್ಕೆನ್ನುವ ಉದ್ದೇಶದೊಂದಿಗೆ ಈಗಾಗಲೆ ಚಾಲನೆ ನೀಡಲಾಗಿದೆ ಎಂದರು.

ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ, ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಚಂದನ್ ಬಿಲ್ಲವ, ಖಜಾಂಚಿ ಕೆ.ಎಂ.ಕೊಠಾರಿ, ಕಾರ್ಯದರ್ಶಿ ಪದ್ಮಾವತಿ, ಎಸ್‌ಡಿಎಂಸಿ ಅಧ್ಯಕ್ಷ ಸುಕುಮಾರ ಗೌಡ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net