

ಬೆಳಗಾವಿ: ಜಿಲ್ಲೆಯಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮುಂದಿನ 2 ವಾರಗಳ ಅವಧಿಯವರೆಗೆ ಸವದತ್ತಿ ಯಲ್ಲಮ್ಮಗುಡ್ಡಕ್ಕೆ ರಾಜ್ಯ ಹಾಗೂ ಹೊರ ರಾಜ್ಯದಿಂದ ಸಾರ್ವಜನಿಕರು, ಭಕ್ತಾಧಿಗಳು ಆಗಮಿಸದಂತೆ ನಿಷೇಧಿಸಲಾಗಿದೆ ಎಂದು ರೇಣುಕಾ ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಸಿ. ಕೋಟಾರಗಸ್ತಿ ತಿಳಿಸಿದ್ದಾರೆ.
ರೇಣುಕಾ ಯಲ್ಲಮ್ಮದೇವಿ ಹಾಗೂ ಪರಿವಾರ ದೇವರುಗಳ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಅರ್ಚಕರು ಮತ್ತು ಸಿಬ್ಬಂದಿ ಮಾತ್ರ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವ ಷರತ್ತಿಗೆ ಒಳಪಟ್ಟು ಎಂದಿನಂತೆ ನೆರವೇರಿಸಲು ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.