ಸಿಡಿಲು ಬಡಿದು ಯುವಕ ಸಾವು

7-YLP SIDILU SAVU
Published on

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗುಂಬಳಿ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಗ್ರಾಮದ ಹರೀಶ ಅರ್ಜುನ ಸಿದ್ದಿ (27) ಮೃತ ದುರ್ದೈವಿ. ಈತ ಮೊಬೈಲ್ ಫೋನ್ ಅನ್ನು ಚಾರ್ಜ್ ಹಾಕುವ ವೇಳೆ ಅವಘಡ ಸಂಭವಿಸಿದೆ. ಬೆಳಗೇರಿ ಗ್ರಾಮದ ಸುಚಿತ್ರಾ ಮಂಜುನಾಥ ಮರಾಠಿ ಮತ್ತು ಉದಯ ನೀಲಕಂಠ ಮರಾಠಿ ಎಂಬುವವರಿಗೂ ಸಿಡಿಲು ಬಡಿದು ಗಾಯಗಳಾಗಿವೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ಸೇರಿಸಿ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಬೆಳಗೇರಿಯ ನೀಲಕಂಠ ಮರಾಠಿ ಅವರ ಆಕಳು ಸಿಡಿಲು ಬಡಿದು ಮೃತಪಟ್ಟಿದೆ. ತಾಲೂಕಿನ ವಿವಿಧೆಡೆ ಶುಕ್ರವಾರ ರಾತ್ರಿ ಗುಡುಗು ಸಹಿತ ಮಳೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net