ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

25-YLP LORRY
Published on

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಟನೆ ತಾಲೂಕಿನ ಬಳಗಾರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶುಕ್ರವಾರ ಸಂಭವಿಸಿದೆ. ಹಳೆಯ ಟಯರ್, ಟ್ಯೂಬ್‌ಗಳನ್ನು ತುಂಬಿಕೊಂಡು ಅಂಕೋಲಾದಿಂದ ಯಲ್ಲಾಪುರ ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ. ಲಾರಿಯಲ್ಲಿದ್ದ ಟಯರ್, ಟ್ಯೂಬ್‌ಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಚಾಲಕ-ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net