ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಲು ಮನವಿ

13-YLP HEBAR CM
Published on

ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಪ್ರಸ್ತುತ ಪ್ರಗತಿಯಲ್ಲಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಅನುದಾನದ ಅಗತ್ಯವಿದೆ. ನೂತನ ನೀರಾವರಿ ಯೋಜನೆಗಳನ್ನು ಆರಂಭಿಸುವ ಕುರಿತಂತೆಯೂ ಪ್ರಸ್ತಾಪಿಸಿ, ಅನುದಾನಕ್ಕಾಗಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆದ್ಯತೆಯ ಮೇರೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾದರೂ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಹೆಬ್ಬಾರ, ಕಾಂಗ್ರೆಸ್ ಜತೆ ನಿಕಟ ಬಾಂಧವ್ಯ ಹೊಂದಿರುವುದು ಗುಟ್ಟಾಗಿ ಉಳಿದಿಲ್ಲ. ಆಗಾಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅನುದಾನಕ್ಕಾಗಿ ಆಗ್ರಹಿಸುವ ವಿಚಾರವೂ ಹೊಸದಲ್ಲ. ಆದರೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದು ಹೆಬ್ಬಾರ ಕಾಂಗ್ರೆಸ್​ನತ್ತ ಸಾಗುವ ಕಾಲ ಹತ್ತಿರವಾಗಿರಬಹುದೆ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಮೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net