

ಯಲ್ಲಾಪುರ: ಲಾರಿಯೊಂದು ಹಿಂಬದಿಯಿಂದ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಅರಬೈಲ್ ಘಟ್ಟದಲ್ಲಿ ಸಂಭವಿಸಿದೆ. ಯಲ್ಲಾಪುರದಿಂದ ಕುಮಟಾ ಕಡೆಗೆ ಹೊರಟಿದ್ದ ಲಾರಿ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಇದರಿಂದ ಎರಡೂ ಲಾರಿಗಳು ಜಖಂಗೊಂಡಿವೆ. ಘಟನೆಯಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾರಿ ತೆರವುಗೊಳಿಸಿ, ಸುಮಗ ಸಂಚಾರ ವ್ಯವಸ್ಥೆಗೆ ಸಹಕರಿಸಿದರು.