ಹೊಲದಲ್ಲಿ ವಿದ್ಯುತ್ ಸ್ಪರ್ಶದಿಂದ ರೈತ ಸಾವು

tranformer new
Published on

ಜಗಳೂರು: ತಾಲೂಕಿನ ಬಿಸ್ತುವಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಮೇವು ತರಲು ಜಮೀನಿಗೆ ಹೋಗಿದ್ದ ರೈತ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ರಾಜಪ್ಪ (55) ಮೃತ ವ್ಯಕ್ತಿ. ಹೊಲದಲ್ಲಿ ಬಿದ್ದಿದ್ದ ಪಂಪ್‌ಸೆಟ್‌ನ ವಿದ್ಯುತ್ ವೈರನ್ನು ಗಮನಿಸದೆ ಅದರ ಮೇಲೆ ಕಾಲಿಟ್ಟಿದ್ದಾನೆ. ವಿದ್ಯುತ್ ಸ್ಪರ್ಶಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಆತನ ಕೈ ಕಾಲುಗಳು ಸುಟ್ಟಿವೆ. ಸ್ಥಳಕ್ಕೆ ಪಿಎಸ್‌ಐ ಇಮ್ರಾನ್ ಬೇಗ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net