

ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ಶತಮಾನೋತ್ತರ ಬೆಳ್ಳಿ ಹಬ್ಬದ ಸವಿನೆನಪಿನಲ್ಲಿ ಆ. 30ರಂದು ಸಂಜೆ 6 ಗಂಟೆಗೆ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಹಳಗನ್ನಡ, ನಡುಗನ್ನಡ ಕಾವ್ಯಗಳ ರಸಾಸ್ವಾದನೆ ಉಪನ್ಯಾಸ ಮಾಲಿಕೆಯಡಿ ಜನ್ನ ಕವಿಯ ‘ಯಶೋಧರ ಚರಿತೆ’ ವಿಷಯ ಕುರಿತು ಉಪನ್ಯಾಸ ಏರ್ಪಡಿಸಿದೆ.
ಬೆಳಗಾವಿಯ ಸಾಹಿತಿ ಡಾ. ರಾಮಕೃಷ್ಣ ಮರಾಠೆ ಉಪನ್ಯಾಸ ನೀಡುವರು. ಸಾಹಿತಿ ವೆಂಕಟೇಶ ಮಾಚಕನೂರ ಕಾರ್ಯಕ್ರಮ ಸಂಯೋಜಿಸುವರು ಎಂದು ಪ್ರಕಟಣೆ ತಿಳಿಸಿದೆ.